ಕುಣಿಗಲ್: ಪ್ರಸಕ್ತ ಶೈಕ್ಷಣಿಕ ಚಟುವಟಿಕೆಗಳು ಶುಕ್ರವಾರದಿಂದ ಪ್ರಾರಂಭವಾಗಿದ್ದು ಶಿಕ್ಷಕರು, ಎಸ್‌ಡಿಎಂಸಿ ಅವರು ಸಿದ್ಧತೆ ಮಾಡಿಕೊಂಡಿದ್ದರು. ಶೇ 60ರಷ್ಟು ವಿದ್ಯಾರ್ಥಿಗಳು ಸಡಗರದಿಂದ ಶಾಲೆಗೆ ಹಾಜರಾಗಿದ್ದರು.

ಸರ್ಕಾರಿ, ಅನುದಾನಿತ ಶಾಲೆ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ವಿತರಿಸಲಾಯಿತು. ಮಧ್ಯಾಹ್ನದ ಬಿಸಿಯೂಟಕ್ಕೆ ಸಿಹಿ ಅಡಿಗೆ ವ್ಯವಸ್ಥೆ ಮಾಡಲಾಗಿದ್ದು, ಬಹುತೇಕ ವಿದ್ಯಾರ್ಥಿಗಳು ಸೋಮವಾರದಿಂದ ಶಾಲೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಒಟ್ಟು 417 ಶಾಲೆಗಳಿದ್ದು 202 ಸರ್ಕಾರಿ ಕಿರಿಯ, 117 ಹಿರಿಯ ಪ್ರಾಥಮಿಕ ಶಾಲೆಗಳಿವೆ. 30 ಸರ್ಕಾರಿ ಪ್ರೌಢ ಶಾಲೆಗಳಿವೆ. 23 ಅನುದಾನಿತ, 9 ಅನುದಾನಿತ ಹಿರಿಯ- ಕಿರಿಯ ಪ್ರಾಥಮಿಕ ಶಾಲೆ, 25 ಅನುದಾನ ರಹಿತ ಶಾಲೆಗಳಿವೆ. ಮಧ್ಯಾಹ್ನದಿಂದಲೇ ಸೇತುಬಂಧ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೋರೇಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.