ಶಿರಾ: ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಗುರುವಾರ ಭಕ್ತರು ಶ್ರೀರಾಮ ನವಮಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಹಬ್ಬದ ಹಿನ್ನೆಲೆಯಲ್ಲಿ ಶ್ರೀರಾಮ, ಆಂಜನೇಯ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರದ ಜ್ಯೋತಿ ನಗರದಲ್ಲಿರುವ ರಾಮ ಮಂದಿರ, ಗವಿ ಆಂಜನೇಯ, ಸಾಕ್ಷಿ ಆಂಜನೇಯ, ನಾಯಕರ ಹಟ್ಟಿಯಲ್ಲಿರುವ ಆಂಜನೇಯ, ಪಂಚಮುಖಿ ಆಂಜನೇಯ, ಕೋಟೆ ಆಂಜನೇಯ, ಸಂತೇಪೇಟೆಯ ಮಾರುತಿ ದೇವಾಲಯ, ಬಿಲ್ವ ಗಣೇಶ ಆಂಜನೇಯ ದೇವಾಲಯದಲ್ಲಿ ಪಂಚಾಭಿಷೇಕ ನಡೆಸಿ ವಿಶೇಷ ಪೂಜೆ ನಡೆಸಲಾಯಿತು.
ಭಕ್ತರು ಬೆಳಿಗ್ಗೆಯಿಂದಲೇ ವಿಶೇಷವಾಗಿ ಶ್ರೀರಾಮಚಂದ್ರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿ ದೇವರಿಗೆ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ದೇವಾಲಯಗಳಲ್ಲಿ ಭಕ್ತರಿಗೆ ಹೆಸರು ಬೇಳೆ ಹಾಗೂ ಪಾನಕ ವಿತರಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.