ಬೆಲೆ ಏರಿಕೆ ನಿಯಂತ್ರಿಸದ ಕೇಂದ್ರ ಸರ್ಕಾರ: ಸಿಐಟಿಯು

7

ಬೆಲೆ ಏರಿಕೆ ನಿಯಂತ್ರಿಸದ ಕೇಂದ್ರ ಸರ್ಕಾರ: ಸಿಐಟಿಯು

Published:
Updated:
Deccan Herald

ತುಮಕೂರು: 'ಅಗತ್ಯ ವಸ್ತುಗಳ ಬೆಲೆ ದೇಶದ ನಗರ ಪ್ರದೇಶದಲ್ಲಿ ಶೇ 21ರಷ್ಟು, ಗ್ರಾಮೀಣ ಪ್ರದೇಶದಲ್ಲಿ ಶೇ 17ರಷ್ಟು ಹೆಚ್ಚಳವಾಗಿದೆ. ಕಚ್ಚಾ ತೈಲ ಬೆಲೆ ಕಡಿಮೆಯಾದರೂ ಕೇಂದ್ರ ಸರ್ಕಾರ ಕಡಿಮೆ ಮಾಡಿಲ್ಲ. ಇದರಿಂದ ಜನಸಾಮಾನ್ಯರ ಬದುಕು ಸಂಕಷ್ಟಕ್ಕೀಡಾಗಿದೆ' ಎಂದು ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್ ಕಳವಳ ವ್ಯಕ್ತಪಡಿಸಿದರು.

ಭಾನುವಾರ ನಗರದ ಟೌನ್‌ ಹಾಲ್ ಹತ್ತಿರ ಕಾರ್ಮಿಕರ ವಿವಿಧ ಬೇಡಿಕಗಳ ಈಡೇರಿಕೆ ಕುರಿತ ಪ್ರಚಾರಾಂದೋಲನದಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರ ನಾಲ್ಕು ವರ್ಷಗಳಲ್ಲಿ ರೂಪಿಸಿದ ನೀತಿಗಳು, ನೋಟು ಅಮಾನ್ವೀಕರಣ, ಜಿಎಸ್‌ಟಿ ಜಾರಿಯಂತಹ ಕ್ರಮಗಳಿಂದ ಜನಸಾಮಾನ್ಯರು ಬಳಸುವ ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿವೆ ಎಂದರು.

ಅಡುಗೆ ಅನಿಲ ಬೆಲೆಯು ಕಳೆದ ನಾಲ್ಕು ವರ್ಷಗಳಲ್ಲಿ ಎರಡು ಪಟ್ಟು ಹೆಚ್ಚಾಗಿದೆ. ಪಡಿತರ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಿ ಬಲಪಡಿಸುವ ಬದಲು ಸಬ್ಸಿಡಿ ಕಡಿತ ಮಾಡಲಾಗಿದೆ. ರೇಶನ್ ಪದ್ಧತಿ ರದ್ದುಪಡಿಸಿ ನಗದು ವರ್ಗಾವಣೆ ಮಾಡುವುದಾಗಿ ಹೇಳಿದ್ದು, ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ ಎಂದು ಆರೋಪಿಸಿದರು.

ಸಿಐಟಿಯು ಜಿಲ್ಲಾ ಖಜಾಂಚಿ ಎ.ಲೋಕೇಶ್ ಮಾತನಾಡಿ,‘ ದೇಶದಲ್ಲಿ ಸ್ವಾತಂತ್ರ್ಯ ನಂತರದ ಸ್ವಾವಲಂಬಿ ಆರ್ಥಿಕತೆಯನ್ನು ಬೆಳೆಸುವ ಉದ್ದೇಶದಿಂದ ಸಾರ್ವಜನಿಕ ಉದ್ದಿಮೆಗಳನ್ನು ಪ್ರಾರಂಭಿಸಲಾಯಿತು. ಆದರೆ, ಈಗಿನ ಕೇಂದ್ರ ಸರ್ಕಾರವು ಅವುಗಳನ್ನು ಮುಚ್ಚಿ ಶೇರುಗಳನ್ನು ಖಾಸಗಿಯವರಿಗೆ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದೆ' ಎಂದು ಆರೋಪಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಮಾತನಾಡಿ,‘ ಈಗ ಅಸ್ತಿತ್ವದಲ್ಲಿರುವ 44 ಕಾರ್ಮಿಕ ಕಾನೂನುಗಳನ್ನು ವಿಲೀನಗೊಳಿಸಿ 4 ಕಾರ್ಮಿಕ ಸಂಹಿತೆಗಳಾಗಿ ಬಂಡವಾಳಿಗರ ಪರ ತಿದ್ದುಪಡಿ ಮಾಡಲು ಹೊರಟಿದೆ. ಈಗಾಗಲೇ ವೇತನ ಕುರಿತ ಕಾರ್ಮಿಕ ಸಂಹಿತೆ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ' ಎಂದು ಹೇಳಿದರು.

ಸಿಐಟಿಯು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಷಣ್ಮುಖಪ್ಪ,ಕಾರ್ಯದರ್ಶಿ ಪುಟ್ಟೇಗೌಡ, ಸಂದೀಪಗೌಡ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !