ಮಧುಗಿರಿ: ಪಟ್ಟಣದ ಮೇಕೆ ಬಂಡೆ ಸಮೀಪ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಬಳಿಕ ಪಟಾಕಿ ಹಚ್ಚುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ.
ಪಟ್ಡಣದ ಮೇಕೆ ಬಂಡೆ ನಿವಾಸಿ ಮಧು (23) ಗಾಯಗೊಂಡವರು. ಪಟ್ಟಣದ ದಂಡಿನ ಮಾರಮ್ಮ ದೇವಾಲಯದ ಆವರಣದಲ್ಲಿ ಮೇಕೆ ಬಂಡೆಯ ಯುವಕರು ಹಾಗೂ ನಿವಾಸಿಗಳು ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು.
ಬುಧವಾರ ಸಂಜೆ ಗಣೇಶ ಮೂರ್ತಿ ವಿಸರ್ಜಿಸಿ ಬಂದು ಪಟಾಕಿ ಹೊಡೆದಿದ್ದಾರೆ. ಈ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಮಧುರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಸ್ಪತ್ರೆಗೆ ಭೇಟಿ ಮಾಹಿತಿ ಪಡೆದರು.