ಮಂಗಳವಾರ, ಜನವರಿ 21, 2020
27 °C
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು; ವಿಜಯೋತ್ಸವದಲ್ಲಿ ಶಾಸಕ ಜ್ಯೋತಿ ಗಣೇಶ್ ಅಭಿಮತ

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಜಯ: ಸಂಘಟಿತ ಹೋರಾಟಕ್ಕೆ ಕನ್ನಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯ ಸರ್ಕಾರ ಸುಭದ್ರವಾಗಿದೆ. ಕಾರ್ಯಕರ್ತರಿಗೆ ಸಂತಸವಾಗಿದೆ’ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು.

ಉಪಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ನಗರದ ಬಿಜಿಎಸ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿ, ಸಂಘಟಿತ ಹೋರಾಟದಿಂದ ಬಿಜೆಪಿ ಗೆಲುವು ಸಾಧಿಸಿತು. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿರುವುದು ಸಂಘಟಿತ ಹೋರಾಟಕ್ಕೆ ಹಿಡಿದ ಕನ್ನಡಿ ಎಂದು ತಿಳಿಸಿದರು.

ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಹೆಬ್ಬಾಕ, ಕಾರ್ಯದರ್ಶಿ ರುದ್ರೇಶ್, ಕೊಪ್ಪಳ ನಾಗರಾಜ್, ಮಹಾನಗರಪಾಲಿಕೆ ಸದಸ್ಯರಾದ ಸಿ.ಎನ್.ರಮೇಶ್, ವಿಷ್ಣುವರ್ಧನ್, ಮುಖಂಡರಾದ ಇಂದ್ರ ಕುಮಾರ್, ವೇದಮೂರ್ತಿ, ಎಂ.ಪಿ ರಮೇಶ್, ಟಿ.ಎಚ್ ಹನುಮಂತರಾಜು ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು