ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರಿನಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಒಪ್ಪಿಗೆ: ಸಿ.ಎಂ ಬೊಮ್ಮಾಯಿ ಭರವಸೆ

Last Updated 25 ಸೆಪ್ಟೆಂಬರ್ 2021, 10:39 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲಾ ಕೇಂದ್ರದಿಂದ ಹೊರಗೆ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲಾ ಕೇಂದ್ರದಲ್ಲಿ ಈಗಾಗಲೇ ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳಿವೆ. ಈಗ ಮತ್ತೊಂದು ಕಾಲೇಜು ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ಹಾಗಾಗಿ ಜಿಲ್ಲಾ ಕೇಂದ್ರದಿಂದ ಹೊರಗೆ ತೆರೆಯಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಕ್ಯಾನ್ಸರ್ ಆಸ್ಪತ್ರೆ, ತಾಯಿ ಹಾಗೂ ಮಕ್ಕಳ ಆಸ್ಪತ್ರೆ, ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ, ‘ತುಮಕೂರಿನಲ್ಲಿ ಜಯದೇವ ಹೃದ್ರೋಗ ಚಿಕಿತ್ಸಾ ಕೇಂದ್ರವನ್ನು ತೆರೆಯಲಾಗುವುದು. ಈ ಕೇಂದ್ರಕ್ಕೆ ಬೇಕಾದ ಜಾಗ ಗುರುತಿಸಿದರೆ ಅಗತ್ಯ ಹಣಕಾಸಿನ ನೆರವು ನೀಡಲಾಗುವುದು’ ಎಂದು ತಿಳಿಸಿದರು.

ತಾಯಿ ಹಾಗೂ ಮಗುವಿನ ಸಾವಿನ ಪ್ರಮಾಣ ಕಡಿಮೆ ಮಾಡಲು ಸರ್ಕಾರ ಒತ್ತು ನೀಡಲಿದೆ. ಮಹಿಳೆ, ಮಕ್ಕಳ ಅಪೌಷ್ಟಿಕತೆ ನೀಗಿಸಲು ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಕೋವಿಡ್ ಮೂರನೇ ಅಲೆ ಎದುರಾದರೆ ಆಮ್ಲಜನಕ, ಹಾಸಿಗೆ ಕೊರತೆ ಆಗದಂತೆ ನೋಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT