ಸೋಮವಾರ, ಏಪ್ರಿಲ್ 19, 2021
29 °C

ಏಪ್ರಿಲ್‌ನಿಂದ ಜಿಲ್ಲಾ ಪ್ರವಾಸ ಮಾಡಿ ಜನರ ಸಮಸ್ಯೆ ಆಲಿಸುತ್ತೇನೆ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಏಪ್ರಿಲ್‌ನಿಂದ ಜಿಲ್ಲಾ ಪ್ರವಾಸ ಮಾಡಲಾಗುವುದು. ಇಡೀ ದಿನ ಜಿಲ್ಲೆಯಲ್ಲಿದ್ದು, ಜನರ ಸಮಸ್ಯೆ ಆಲಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ತಿಪಟೂರಿನಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುವಂತೆ ಮುಖ್ಯ ಕಾರ್ಯದರ್ಶಿಗೂ ಸೂಚಿಸಲಾಗುವುದು ಎಂದರು.

ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಶಾಲೆಗಳನ್ನು ಮುಚ್ಚುವಂತಹ ವಾತಾವರಣ ನಿರ್ಮಾಣವಾಗಿಲ್ಲ. ಒಂದು ವಾರ ಪರಿಸ್ಥಿತಿಯನ್ನು ಗಮನಿಸಿ ಮುಂದೆ ನಿರ್ಧಾರ ಕೈಗೊಳ್ಳಲಾಗುವುದು. ಸಾರ್ವಜನಿಕ ಸಭೆಗಳನ್ನು ನಡೆಸಲು ಯಾವುದೇ ಷರತ್ತುಗಳನ್ನು ವಿಧಿಸಿಲ್ಲ. ಆದರೆ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಬೇಕು. ಉಪಚುನಾವಣೆ ಕಾರ್ಯಕ್ರಮ, ಸಭೆಗಳಿಗೂ ಇದು ಅನ್ವಯವಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಕೋವಿಡ್–19 ಗಮನದಲ್ಲಿ ಇಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಮಹಿಳೆಯರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ರೈತರ ಆದಾಯ ದ್ವಿಗುಣ ಮಾಡಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಈ ದೃಷ್ಟಿಯಲ್ಲಿ ರೈತರ ಪರ ಬಜೆಟ್ ಮಂಡಿಸಲಾಗಿದೆ. ನೀರಾವರಿ ಯೋಜನೆಗಳಿಗೂ ಹಣ ಒದಗಿಸಿದ್ದು, ಎತ್ತಿನಹೊಳೆ, ಭದ್ರಾ ಮೇಲ್ದಂಡೆ ಯೋಜನೆಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಕೋವಿಡ್ ನಿಯಂತ್ರಣ, ನಿರ್ವಹಣೆ ಸಮಯದಲ್ಲಿ ಹಣ ದುರುಪಯೋಗ ಆಗಿದ್ದರೆ ವಿರೋಧ ಪಕ್ಷದವರು ಸಾಕ್ಷಾಧಾರಗಳ ಸಮೇತ ತಿಳಿಸಲಿ. ಆಗ ಕ್ರಮ ಕೈಗೊಳ್ಳಲಾಗುವುದು. ಆಧಾರ ರಹಿತವಾಗಿ ಆರೋಪ ಮಾಡುವುದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದರು.

ಇದನ್ನೂ ಓದಿ... ವಿಜಯಪುರ: ಬಿಎಸ್ಎನ್‌ಎಲ್‌ ಕಚೇರಿ ಮೇಲೆ ಸಿಬಿಐ ದಾಳಿ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು