ಕೆಎಸ್‌ಆರ್‌ಟಿಸಿ 405, ಖಾಸಗಿ 220 ಬಸ್‌ಗಳ ಬಳಕೆ ಬಹುತೇಕ ಕಡೆಗಳಲ್ಲಿ ಸೋಮವಾರ ಬಸ್ ಸಂಚಾರ ಸ್ಥಗಿತ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಸ್ಯೆ
ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ದಿನ ನಿತ್ಯ ಸಂಚರಿಸುವ ರೂಟ್‌ಗಳಲ್ಲಿ ಬಸ್‌ಗಳ ಸಂಖ್ಯೆ ಕಡಿತ ಮಾಡದಂತೆ ಸೂಚಿಸಲಾಗಿದೆ.
ಶುಭ ಕಲ್ಯಾಣ್ ಜಿಲ್ಲಾಧಿಕಾರಿ
ಸಮಾವೇಶಕ್ಕೆ ಲಕ್ಷ ಮಂದಿ
ವಿವಿಧ ಯೋಜನೆಗಳ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಜಿಲ್ಲಾ ಆಡಳಿತದ ವತಿಯಿಂದ ಕರೆ ತರಬೇಕಿದೆ. ಸಮಾವೇಶಕ್ಕೆ ಸುಮಾರು ಒಂದು ಲಕ್ಷದಷ್ಟು ಜನರನ್ನು ಸೇರಿಸುವ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೀಡಲಾಗಿದೆ. ಜಿಲ್ಲೆಯ ಎಲ್ಲೆಡೆಯಿಂದಲೂ ಜನರನ್ನು ಕರೆತರುವುದು ಅನಿವಾರ್ಯವಾಗಿದ್ದು ಕೆಎಸ್‌ಆರ್‌ಟಿಸಿ ಖಾಸಗಿ ಬಸ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸಹಜವಾಗಿ ಬಸ್‌ಗಳ ಕೊರತೆ ಎದುರಾಗಲಿದೆ.