ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಸಿ.ನಂಜಯ್ಯ ನೂತನ ಡಿಡಿಪಿಐ

Last Updated 21 ಜುಲೈ 2020, 16:36 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಸಿ.ನಂಜಯ್ಯ ಅವರನ್ನು ನೇಮಕ ಮಾಡಿ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

ಸಿ.ನಂಜಯ್ಯ ಈ ಹಿಂದೆ ತುಮಕೂರು ಹಾಗೂ ಗುಬ್ಬಿ ತಾಲ್ಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಚಿಕ್ಕಮಗಳೂರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದರು. ನಂತರ ಅಲ್ಲಿಂದ ವರ್ಗಾವಣೆಗೊಂಡ ಸ್ಥಳ ನಿರೀಕ್ಷೆಯಲ್ಲಿದ್ದರು. ಮಂಗಳವಾರ ಅವರನ್ನು ತುಮಕೂರು ಡಿಡಿಪಿಐ ಆಗಿ ನೇಮಕ ಮಾಡಿ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT