ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಟಿ.ಟಿ. ಇನ್ನಷ್ಟು ಜನಪ್ರಿಯವಾಗಲಿದೆ’

ಕಾಮನ್‌ವೆಲ್ತ್‌ನಲ್ಲಿ ನಾಲ್ಕು ಪದಕ ಗೆದ್ದ ಮಣಿಕಾ ಬಾತ್ರಾ ವಿಶ್ವಾಸ
Last Updated 17 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ‘ಕಾಮನ್‌ವೆಲ್ತ್‌ ಕ್ರೀಡಾಕೂಟದ ಟೇಬಲ್‌ ಟೆನಿಸ್‌ನ ವಿವಿಧ ವಿಭಾಗಗಳಲ್ಲಿ ನಾಲ್ಕು ಪದಕಗಳನ್ನು ಜಯಿಸಿದ್ದು ಹೆಮ್ಮೆಯ ಸಂಗತಿ. ಇದರಿಂದ ಟೇಬಲ್‌ ಟೆನಿಸ್‌ ಕ್ರೀಡೆಯು ರಾಷ್ಟ್ರದಲ್ಲಿ ಇನ್ನಷ್ಟು ಜನಪ್ರಿಯಗೊಳ್ಳಲಿದೆ’ ಎಂದು ಮಣಿಕಾ ಬಾತ್ರಾ ಹೇಳಿದ್ದಾರೆ.

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಚಾರಿತ್ರಿಕ ಸಾಧನೆ ಮಾಡಿ ಮಂಗಳವಾರ ಭಾರತಕ್ಕೆ ಮರಳಿದ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

‘ಬ್ಯಾಡ್ಮಿಂಟನ್‌ ಆಟಗಾರ್ತಿಯರಾದ ಸಿಂಧು ಹಾಗೂ ಸೈನಾ ನೆಹ್ವಾಲ್‌ ಅವರು ತಮ್ಮ ಸಾಮರ್ಥ್ಯದ ಮೂಲಕ ಆ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುವಂತೆ ಮಾಡಿದ್ದಾರೆ. ಹಾಗಾಗಿ, ಇತ್ತೀಚಿನ ವರ್ಷಗಳಲ್ಲಿ ಬ್ಯಾಡ್ಮಿಂಟನ್‌ ಕ್ರೀಡೆಗೆ ಭಾರತದಲ್ಲಿ ಅಪಾರ ಜನಮನ್ನಣೆ ಸಿಗುತ್ತಿದೆ. ಇನ್ನು ಮುಂದೆ ಟೇಬಲ್‌ ಟೆನಿಸ್‌ಗೂ ಇದೆ ರೀತಿಯ ಜನಪ್ರಿಯತೆ ಸಿಗಲಿದೆ’ ಎಂದು ಅವರು ಹೇಳಿದ್ದಾರೆ.

ಬಾಕ್‌ ಇಂದು ಭಾರತಕ್ಕೆ: ಅಂತರರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಥಾಮಸ್ ಬಾಕ್‌ ಎರಡು ದಿನಗಳ ಪ್ರವಾಸಕ್ಕಾಗಿ ಬುಧವಾರ ಭಾರತಕ್ಕೆ ಬರಲಿದ್ದಾರೆ. ಅವರನ್ನು ಭೇಟಿಯಾಗಲಿರುವ ಭಾರತ ಒಲಿಂಪಿಕ್‌ ಸಂಸ್ಥೆಯ ಪದಾಧಿಕಾರಿಗಳು ಮುಂದಿನ ಯುವ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಅವಕಾಶ ಕೋರಲಿದ್ದಾರೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT