ಸೋಮವಾರ, ಸೆಪ್ಟೆಂಬರ್ 27, 2021
22 °C
ತಿಪಟೂರಿನಲ್ಲಿ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಆರೋಪ

ಕೊಬ್ಬರಿ ಮಾಫಿಯಾ, ದಿನಕ್ಕೆ ₹ 1 ಕೋಟಿ ತೆರಿಗೆ ವಂಚನೆ: ಪ್ರಮೋದ್‌ ಮುತಾಲಿಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು: ‘ನಗರದ ಎಪಿಎಂಸಿ ಕೊಬ್ಬರಿ ಮಾರುಕಟ್ಟೆಯಲ್ಲಿ ವ್ಯವಸ್ಥಿತವಾಗಿ ಸರ್ಕಾರಕ್ಕೆ ತೆರಿಗೆ ವಂಚಿಸುತ್ತಿರುವ ದೊಡ್ಡ ಮಾಫಿಯಾ ಜಾಲ ಇದೆ’ ಎಂದು ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮೂಲ ದಾಖಲೆ ಇಲ್ಲದೆ ನಕಲಿ ದಾಖಲೆ ಸೃಷ್ಟಿಸಿ ಎಪಿಎಂಸಿ ಮಾರುಕಟ್ಟೆಯ ಮೂಲಕ ಅಕ್ರಮವಾಗಿ ಕೊಬ್ಬರಿ ರವಾನೆಯಾಗುತ್ತಿದೆ. ಪ್ರತಿನಿತ್ಯ ಸರ್ಕಾರಕ್ಕೆ ಒಂದು ಕೋಟಿ ತೆರಿಗೆ ವಂಚಿಸಲಾಗುತ್ತಿದೆ. ಮಾಹಿತಿಯ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಯಲ್ಲಿ ಇದು ಸಾಬೀತಾಗಿದೆ’ ಎಂದು ಹೇಳಿದರು.

‘ಆದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಈ ದಂಧೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಎಪಿಎಂಸಿ ಮತ್ತು ಜನಪ್ರತಿನಿಧಿಗಳೂ ಕೂಡ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಸರ್ಕಾರ ಕ್ರಮ ಮಾಫಿಯಾ ಜಾಲವನ್ನು ಹತ್ತಿಕ್ಕಬೇಕು’ ಎಂದು ಆಗ್ರಹಿಸಿದರು.

ಆರ್‌ಟಿಐ ಕಾರ್ಯಕರ್ತ ರವಿಕುಮಾರ್ ಗೋಷ್ಠಿಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.