ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಬ್ಬರಿ: ನೋಂದಣಿ ಶುರು

ಪ್ರತಿ ಕ್ವಿಂಟಲ್‌ ₹10,300 ಬೆಲೆ ನಿಗದಿ
Last Updated 17 ಜೂನ್ 2020, 8:29 IST
ಅಕ್ಷರ ಗಾತ್ರ

ತುಮಕೂರು: ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್‌ಗೆ ₹10,300ರಂತೆ ಖರೀದಿಸಲಿದ್ದು, ಜೂನ್ 18ರಿಂದ ಜುಲೈ 4ರ ವರೆಗೆ ರೈತರು ತಮ್ಮ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದೆ.

ತಿಪಟೂರು, ಚಿಕ್ಕನಾಯಕನ ಹಳ್ಳಿ, ಹುಳಿಯಾರು, ಗುಬ್ಬಿ, ತುರುವೇಕೆರೆ, ತುಮಕೂರು, ಕುಣಿಗಲ್, ಶಿರಾ, ಚೇಳೂರು ಎಪಿಎಂಸಿ ಪ್ರಾಂಗಣದಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಖರೀದಿ ಕೇಂದ್ರಗಳಿಗೆ ಆಧಾರ್ ಕಾರ್ಡ್, ರೈತ ಸಂಪರ್ಕ ಕೇಂದ್ರದಲ್ಲಿ ಪಡೆದ ನಂಬರ್‌ನೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕು.

ಜುಲೈ 6ರಿಂದ ನೋಂದಾಯಿಸಿದ ಪ್ರತಿ ರೈತರಿಂದ ಪ್ರತಿ ಎಕರೆಗೆ 6 ಕ್ವಿಂಟಲ್‌ನಂತೆ ಗರಿಷ್ಠ 20 ಕ್ವಿಂಟಲ್ ಖರೀದಿಸಲಾಗುವುದು. ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದರು.

ಎಪಿಎಂಸಿ ಉಪನಿರ್ದೇಶಕ ಈ.ದ್ವಾರಕ ಪ್ರಸಾದ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT