ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ಮಾರ್ಟ್ ಸಿಟಿ’ಗೆ ಕಾಲೇಜುಗಳ ಕೊಡುಗೆ

ಸುಸಜ್ಜಿತ ನಗರ ಯೋಜನೆಯಲ್ಲಿ ಇತ್ತೀಚಿನ ಅಭಿವೃದ್ಧಿ ಕುರಿತ ತರಬೇತಿ
Last Updated 24 ನವೆಂಬರ್ 2020, 3:08 IST
ಅಕ್ಷರ ಗಾತ್ರ

ತುಮಕೂರು: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳು ಸಮರ್ಪಕವಾಗಿ, ತ್ವರಿತವಾಗಿ ಪೂರ್ಣಗೊಳ್ಳಲು ನಗರದಲ್ಲಿ ಇರುವ 5 ಎಂಜಿನಿಯರಿಂಗ್ ಕಾಲೇಜುಗಳ ಕೊಡುಗೆ ಮಹತ್ವದ್ದಾಗಿದೆ ಎಂದು ಬೆಂಗಳೂರಿನವಿದ್ಯುಚ್ಛಕ್ತಿಉತ್ಪಾದನಾ ಸಂಶೋಧನಾ ಮತ್ತು ಅಭಿವೃದ್ಧಿ ಸಮನ್ವಯ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಡಾ.ಆರ್.ನಾಗರಾಜ್ ಅಭಿಪ್ರಾಯಪಟ್ಟರು.

ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದಿಂದ ಏರ್ಪಡಿಸಿದ್ದ ಎಐಸಿಟಿಇ ಪ್ರಾಯೋಜಿತ ‘ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಇತ್ತೀಚಿನ ಅಭಿವೃದ್ಧಿ’ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳು ಮತ್ತು ಕಾಲೇಜುಗಳ ನಡುವೆ ಸಮನ್ವಯ ಸಾಧಿಸಬೇಕು. ಯೋಜನೆ ವೇಗವನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯವಿದೆ ಎಂದರು.

‘ಸಾಹೇ’ ವಿಶ್ವವಿದ್ಯಾಲಯ ಕುಲಪತಿ ಡಾ.ಬಾಲಕೃಷ್ಣ ಪಿ.ಶೆಟ್ಟಿ, ‘ಸ್ಮಾರ್ಟ್ ಸಿಟಿ ಯೋಜನೆಗೆ ಹಣವೊಂದೇ ಪ್ರಧಾನವಾಗಿರಬಾರದು. ಋಣಾತ್ಮಕ ಚಿಂತನೆ, ಆಲೋಚನೆಗಳು ‘ಸ್ಮಾರ್ಟ್’ ಆದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ’ ಎಂದರು.

ಸಾಹೇ ವಿಶ್ವವಿದ್ಯಾಲಯ ಕುಲಸಚಿವ ಡಾ.ಎಂ.ಝೆಡ್.ಕುರಿಯನ್, ಡಾ.ರವಿಪ್ರಕಾಶ್, ಡಾ.ಸಂಜೀವ್ ಕುಮಾರ್, ಡಾ.ಶೇಷಾದ್ರಿ, ಡಾ.ರಾಜೇಶ್ ಕಾಮತ್, ಪ್ರದೀಪ್ ಇದ್ದರು. 12 ರಾಜ್ಯಗಳ ಪ್ರತಿನಿಧಿಗಳು ವೆಬಿನಾರ್‌ನಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT