ಭಾನುವಾರ, ಆಗಸ್ಟ್ 1, 2021
27 °C

ಕೊರೊನಾ ಲಕ್ಷಣವಿದ್ದರೆ ಫೀವರ್‌ ಕ್ಲಿನಿಕ್‌ಗೆ ಬನ್ನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕೋವಿಡ್-19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರೋಗದ ಲಕ್ಷಣಗಳು ಕಂಡು ಬಂದ ಕೂಡಲೇ ಫೀವರ್ ಕ್ಲಿನಿಕ್‌ಗೆ ಭೇಟಿ ನೀಡಿ ಪರೀಕ್ಷೆಗೆ ಒಳಗಾಗಬೇಕು ಎಂದು ಉಪವಿಭಾಗಾಧಿಕಾರಿ ಅಜಯ್ ತಿಳಿಸಿದ್ದಾರೆ.

‌ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಮುಂದಾಗಿದೆ. ಈ ರೋಗದ ಲಕ್ಷಣಗಳಾದ ಕೆಮ್ಮು, ಸೀನು, ಜ್ವರ, ತಲೆನೋವು, ವಾಂತಿ, ಭೇದಿ, ಮೈ ಕೈ ನೋವು ಹಾಗೂ ಇತರೆ ಲಕ್ಷಣಗಳು ಕಂಡು ಬಂದರೆ ಭಯಭೀತರಾಗದೆ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಬರಬೇಕು. ಕೋವಿಡ್ ಕೇರ್ ಸೆಂಟರ್‌ಗೆ ಅಥವಾ ಹೋಂ ಐಸೋಲೇಷನ್‌ನಲ್ಲಿ ವೈದ್ಯರ ನಿರ್ದೇಶನದಂತೆ ಪೂರಕ ಚಿಕಿತ್ಸೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್‌ಗಳನ್ನು ಸರಬರಾಜು ಮಾಡಲಾಗಿದ್ದು ಈ ಪರೀಕ್ಷೆಯಲ್ಲಿ ಕೇವಲ 15 ನಿಮಿಷಗಳಲ್ಲಿ ಕೋವಿಡ್-19ರ ಫಲಿತಾಂಶ ದೊರಕಲಿದೆ. ಜಿಲ್ಲೆಯಲ್ಲಿ ಸ್ಥಾಪಿಸಿರುವ ಆರ್‌ಟಿಪಿಸಿಆರ್ ಲ್ಯಾಬ್‌ಗಳಲ್ಲಿ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿಕೊಟ್ಟ ನಂತರ ಫಲಿತಾಂಶ ಬರುವ ತನಕ ಪ್ರತ್ಯೇಕವಾಗಿ ಮನೆಯ ಒಂದು ಕೊಠಡಿಯಲ್ಲಿ ಕ್ವಾರಂಟೈನ್ ಆಗಲು ಸೂಚಿಸಿದೆ ಎಂದು ತಿಳಿಸಿದ್ದಾರೆ.

ಅಕ್ಕಪಕ್ಕದ ಮನೆಗೆ ಬೇರೆ ರಾಜ್ಯ, ಜಿಲ್ಲೆಗಳಿಂದ ಬರುವ ವ್ಯಕ್ತಿಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಬೇಕು. ತಮಗೆ ತಿಳಿದಿರುವ ಯಾವುದೇ ವ್ಯಕ್ತಿಗೆ ಕೋವಿಡ್-19 ಲಕ್ಷಣಗಳು ಕಂಡು ಬಂದರೆ ತುರ್ತಾಗಿ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗೆ ತುಮಕೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರತ್ ಚಂದ್ರ ಮೊ 9880105993, ಡಾ.ಕೇಶವರಾಜ್ 9449843210, ಕುಣಿಗಲ್‌ ಡಾ.ಜಗದೀಶ್ 9591414700, ಡಾ.ಚೇತನ್ 8971884715, ಗುಬ್ಬಿ ಡಾ.ಬಿಂದುಮಾಧವನ್ 8277507011, ಡಾ.ರಜನಿ 9448613666 ಅವರನ್ನು ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.