ಮಧುಗಿರಿ: ‘ಮಧುಗಿರಿ ಜಿಲ್ಲಾ ಕೇಂದ್ರ ಮಾಡಲು ಬದ್ಧ. ಈ ಬಗ್ಗೆ ಮುಖ್ಯಮಂತ್ರಿ ಕೂಡ ಒಪ್ಪಿಗೆ ನೀಡುವ ಆಶಯ ಇದೆ’ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು.

ಕೊಡಿಗೇನಹಳ್ಳಿ ಹೋಬಳಿಯ ಯಾರ್ಕಾಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿವಿಧ ಸವಲತ್ತು ವಿತರಣೆ ಹಾಗೂ ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಶೀಘ್ರದಲ್ಲೇ ₹350 ಕೋಟಿ ಅನುದಾನದ ವಿವಿಧ ಕಾಮಗಾರಿಗಳ ಭೂಮಿಪೂಜೆಗೆ ಮುಖ್ಯಮಂತ್ರಿ ಬರಲಿದ್ದು, ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆಯ ಮೂಲಕ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದರು.

ಬಾಲ್ಯದಲ್ಲಿ ಮಕ್ಕಳು ಶ್ರದ್ಧೆಯಿಂದ ಪಾಠ ಪ್ರವಚ ಹಾಗೂ ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಜೀವನದಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂದರು.

ಜಿ.ಪಂ ಸಿಇಒ ಜಿ. ಪ್ರಭು ಮಾತನಾಡಿ, ವಿದ್ಯಾವಂತರು ದೇಶಕ್ಕೆ ಆಸ್ತಿಯಾಗುತ್ತಾರೆ. ಇಂತಹ ಆಸ್ತಿಯನ್ನು ರೂಪಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಶಿಕ್ಷಣ ಇಲಾಖೆ, ಆರೋಗ್ಯ ಕೇಂದ್ರ, ಅಂಗನವಾಡಿ ಹಾಗೂ ಗ್ರಾಮ ಪಂಚಾಯಿತಿ ಆಡಳಿತದಿಂದ ವ್ಯವಸ್ಥಿತ ಯೋಜನೆಗಳನ್ನು ರೂಪಿಸಿಕೊಂಡು ಜಿಲ್ಲೆಯಲ್ಲಿ ಪ್ರತಿ ವರ್ಷ ಜಿಲ್ಲಾ ಪಂಚಾಯಿತಿಯಿಂದ ₹700 ಕೋಟಿಯಷ್ಟು ವಾರ್ಷಿಕ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 1,200 ಕಟ್ಟಡಗಳನ್ನು ತೆರವು ಮಾಡಿ ನೂತನ ಕಟ್ಟಡಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಾ.ಪಂ.ಇಒ ಲಕ್ಷ್ಮಣ್, ಬಿಇಒ ಹನುಮಂತರಾಯಪ್ಪ, ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷ ನರಸೇಗೌಡ, ತಾ.ಪಂ. ಮಾಜಿ ಸದಸ್ಯ ಚಲಪತಿ, ಗ್ರಾಪಂ ಸದಸ್ಯರಾದ ವಿನೋದ, ರಾಮಚಂದ್ರಯ್ಯ, ಲಕ್ಷ್ಮಿನಾರಾಯಣಪ್ಪ, ಕೆಎಂಎಫ್ ನಿರ್ದೇಶಕ ಕಾಂತರಾಜು, ಜಿ.ಪಂ.ಮಾಜಿ ಸದಸ್ಯ ಚಂದನದೂರು ನರಸಿಂಹಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಯಣ ರೆಡ್ಡಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.