ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಏಳಿಗೆಗೆ ಬದ್ಧ

ಡಿಸಿಸಿ ಬ್ಯಾಂಕ್ ಜಿಲ್ಲಾ ಉಪಾಧ್ಯಕ್ಷ ಜಿ.ಜೆ.ರಾಜಣ್ಣ
Last Updated 10 ಏಪ್ರಿಲ್ 2021, 4:20 IST
ಅಕ್ಷರ ಗಾತ್ರ

ಪಾವಗಡ: ವ್ಯವಸಾಯ ಸೇವಾ ಸಹಕಾರ ಸಂಘಗಳು ರೈತರ ಏಳಿಗೆಗೆ ಬದ್ಧವಾಗಿವೆ ಎಂದು ಡಿಸಿಸಿ ಬ್ಯಾಂಕ್ ಜಿಲ್ಲಾ ಘಟಕದ ಉಪಾಧ್ಯಕ್ಷ ಜಿ.ಜೆ.ರಾಜಣ್ಣ ತಿಳಿಸಿದರು.

ತಾಲ್ಲೂಕಿನ ಮಂಗಳವಾಡದಲ್ಲಿ ಗುರುವಾರ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಲ ಪಡೆದ ರೈತರು ಮೃತಪಟ್ಟರೆ ಅಂತಹವರ ಸಾಲಮನ್ನಾ ಮಾಡುವ ಮೂಲಕ ರೈತ ಕುಟುಂಬಗಳಿಗೆ ಬ್ಯಾಂಕ್ ಆಸರೆಯಾಗಿ ನಿಂತಿದೆ. ಕೋವಿಡ್ 19 ನಿಂದಾಗಿ ಕಂಗಾಲಾಗಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವುದರೊಂದಿಗೆ ಸಾವಿರಾರು ಬೀದಿ ಬದಿ ವ್ಯಾಪಾರಿಗಳ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬುವಲ್ಲಿ ಡಿಸಿಸಿ ಬ್ಯಾಂಕ್ ಸಹಕಾರಿಯಾಗಿದೆ ಎಂದರು.

ಶಾಸಕ ವೆಂಕಟರವಣಪ್ಪ, ರೈತರು ಸಾಲ ಪಡೆದ ಹಣವನ್ನು ಯಾವ ಉದ್ದೇಶಕ್ಕಾಗಿ ಪಡೆಯಲಾಗಿದೆಯೊ ಅದೇ ಉದ್ದೇಶಕ್ಕೆ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಸಾಲದ ಹಣವನ್ನು ಆರ್ಥಿಕ ಸ್ವಾವಲಂಬನೆಯಾಗಲು ಅಗತ್ಯವಿರುವ ಚಟುವಟಿಕೆಗಳಿಗೆ ಹೂಡಿಕೆ ಮಾಡಬೇಕು ಎಂದರು.

ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ತಾಲ್ಲೂಕಿನಂತಹ ಹಿಂದುಳಿದ ಪ್ರದೇಶಗಳ ರೈತರಿಗೆ ಡಿಸಿಸಿ ಬ್ಯಾಂಕ್ ಆಸರೆಯಾಗಿದೆ. ಜನತೆ ಇದರ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ನಿರ್ದೇಶಕ ಟಿ. ನರಸಿಂಹಯ್ಯನವರು, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್. ವಿ ವೆಂಕಟೇಶ್, ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಕೆ.ಹೆಚ್ ಪ್ರಕಾಶ್, ಚಿಕ್ಕ ನಾಗಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಪುಟ್ಟಣ್ಣ, ಹನುಮಂತರಾಯಪ್ಪ, ಶಂಕರರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಡ್ಡಗೇರಮ್ಮ, ಬ್ಯಾಂಕ್ ಸಲಹೆಗಾರ ಜಂಗಪ್ಪ, ವ್ಯವಸ್ಥಾಪಕ ನಿರ್ದೇಶಕ ಶ್ರೀಧರ್, ವ್ಯವಸ್ಥಾಪಕ ರಾಮಕೃಷ್ಣನಾಯ್ಕ, ಡಿಸಿಸಿ ಮೇಲ್ವಿಚಾರಕ ಸೇವಾನಾಯ್ಕ, ಸೀನಪ್ಪ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿದ್ಯಾಶಂಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT