ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಪಿಐ, ಸಿಪಿಎಂ, ಎಸ್‌ಯುಸಿಐ ಆನ್‌ಲೈನ್ ಪ್ರತಿಭಟನೆ

Last Updated 1 ಜೂನ್ 2021, 4:31 IST
ಅಕ್ಷರ ಗಾತ್ರ

ತುಮಕೂರು: ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಪಿಐ, ಸಿಪಿಎಂ, ಎಸ್‌ಯುಸಿಐ (ಕಮ್ಯುನಿಸ್ಟ್) ಒಟ್ಟಾಗಿ ಜೂನ್ 1ರಂದು ಆನ್‌ಲೈನ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿವೆ.

ಸಾರ್ವತ್ರಿಕ ಉಚಿತ ಲಸಿಕೆ, ಔಷಧಿ, ಚಿಕಿತ್ಸೆಗಾಗಿ ನೇರ ನಗದು ಪರಿಹಾರ, ಉಚಿತ ಪಡಿತರ, ರೈತ, ಕಾರ್ಮಿಕ ವಿರೋಧಿ ಕಾನೂನುಗಳ ರದ್ದತಿ, 200 ದಿನಗಳ ಉದ್ಯೋಗ ಖಾತ್ರಿಯನ್ನು ನಗರಗಳಿಗೂ ವಿಸ್ತರಣೆ, ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆಗೆ ಒತ್ತಾಯಿಸಲಾಗುತ್ತದೆ.

ಮನೆಗಳು ಹಾಗೂ ಮನೆಗಳ ಮುಂದೆ, ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಪ್ರತಿಭಟಿಸಬೇಕು ಎಂದು ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ.

ಕೋವಿಡ್ ಎರಡನೇ ಅಲೆ ಸಾವಿರಾರು ಜನರನ್ನು ಆಹುತಿ ತೆಗೆದುಕೊಂಡಿದೆ. ಕುಟುಂಬಕ್ಕೆ ಆಧಾರವಾಗಿ ಇದ್ದವರನ್ನು ಕಳೆದುಕೊಂಡಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರ ಸಕಾಲದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ ಜನರನ್ನು ಸಾವಿನ ದವಡೆಗೆ ನೂಕಿವೆ. ದೇಶಪ್ರೇಮ, ದೇಶಭಕ್ತಿ ಬಗ್ಗೆ ಭಾಷಣ ಮಾಡುವ ನಾಯಕರು, ಜನರ ಜೀವ ಉಳಿಸಲು ಅಗತ್ಯವಾದ ಆಸ್ಪತ್ರೆಗಳು, ಆಮ್ಲಜನಕ ಸಹಿತ ಹಾಸಿಗೆ ವ್ಯವಸ್ಥೆ ಮಾಡಲಿಲ್ಲ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ನೊಂದಿಲ್ಲ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT