ಇಂಧನ ಬೆಲೆ ಏರಿಕೆಗೆ ಖಂಡನೆ

ಕುಣಿಗಲ್: ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಂದಾಗಿ ಸಾರ್ವಜನಿಕರು ಮತ್ತು ರೈತರ ಬದುಕು ದುಸ್ತರವಾಗಿದೆ
ಎಂದು ಶಾಸಕ ಡಾ.ರಂಗನಾಥ್ ಹೇಳಿದರು.
ತೈಲ ಬೆಲೆ ಏರಿಕೆ ಖಂಡಿಸಿ ಬುಧವಾರ ಪಟ್ಟಣದ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯವರೆಗೆ ಸೈಕಲ್ ಜಾಥಾ ನಡೆಸುವುದರ ಮೂಲಕ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದರು.
ಸರ್ಕಾರ ತೈಲ ಬೆಲೆ ಏರಿಕೆ ನಿಯಂತ್ರಿಸದ ಕಾರಣ ಪ್ರತಿಯೊಂದು ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಪರವಾಗಿಯೇ ಇದ್ದು, ಎಲ್ಲ ವಿಚಾರದಲ್ಲೂ ಅವರಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಣಯ ಕೈಗೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು
ಪುರಸಭೆ ಅಧ್ಯಕ್ಷ ನಾಗೇಂದ್ರ, ಉಪಾಧ್ಯಕ್ಷೆ ಮಂಜುಳಾ, ಸದಸ್ಯ ಉದಯ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಯುವ
ಕಾಂಗ್ರೆಸ್ ಅಧ್ಯಕ್ಷ ಲೋಹಿತ್, ಮುಖಂಡರಾದ ಅಜಂ ಪಾಷಾ, ರೆಹಮಾನ್ ಷರೀಫ್, ಶಂಕರ್,ಪಾಪಣ್ಣ ಅಬ್ದುಲ್ ಹಮೀಧ್, ಪ್ರಚಾರ ಸಮಿತಿ ಅಧ್ಯಕ್ಷ ಬೇಗೂರು ನಾರಾಯಣ್
ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.