ಸೋಮವಾರ, ಅಕ್ಟೋಬರ್ 18, 2021
24 °C
ಕ್ಸಾತ್ಸಂದ್ರ ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ಅಡಗುದಾಣ ನಿರ್ಮಾಣ

ತುಮಕೂರು ಹೈವೆಲಿ ಕಾಂಡೋಮ್‌ಗಳ ರಾಶಿ ಪತ್ತೆಯಾಗಿದ್ದರ ಅಸಲಿಯತ್ತು ಬಯಲು...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರದ ಕ್ಸಾತ್ಸಂದ್ರ ವಸತಿ ಗೃಹವೊಂದರ ಮೇಲೆ ಸೋಮವಾರ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದು, ಐವರು ಪುರುಷರನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ಕ್ಯಾತ್ಸಂದ್ರ ಸೇತುವೆ ಸಮೀಪ ಕಳೆದ ಕೆಲ ದಿನಗಳ ಹಿಂದೆ ಕಾಂಡೋಮ್‌ಗಳ ರಾಶಿ ಚೆಲ್ಲಾಡಿದ್ದರ ಹಿಂದೆ ಈ ವಸತಿಗೃಹದ ಕೈವಾಡ ಇದೆ ಎಂದು ತಿಳಿದು ಬಂದಿದೆ.

ಈ ಸಮಯದಲ್ಲಿ ಒಬ್ಬ ಮಹಿಳೆ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ವಸತಿ ಗೃಹದಲ್ಲಿ ಸುರಂಗ ಕೊರೆದು ಮಹಿಳೆಯರನ್ನು ಬಚ್ಚಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವುದು ಪತ್ತೆಯಾಗಿದೆ. ಪೊಲೀಸರು ದಾಳಿ ಮಾಡಲು ತೆರಳಿದ ಸಮಯದಲ್ಲಿ ಸೂಚನೆ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಈ ಸೂಚನೆ ಬರುತ್ತಿದ್ದಂತೆ ಮಹಿಳೆಯರು ಹಾಗೂ ಪುರುಷರನ್ನು ಗುಹೆಯಲ್ಲಿ ಬಚ್ಚಿಡಲಾಗುತಿತ್ತು. ಸುರಂಗ ಮಾರ್ಗ ಇರುವುದು ಗೊತ್ತಾಗದಂತೆ ನೋಡಿಕೊಳ್ಳಲಾಗಿತ್ತು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶುರಾಮ್ ಅವರು ಈ ವಿಚಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತಂದಿದ್ದರು. ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ವೇಶ್ಯಾವಾಟಿಕೆ ನಡೆಯುತ್ತಿದ್ದು, ಖಚಿತಪಟ್ಟಿದೆ.

ರಾಷ್ಟ್ರೀಯ ಹೆದ್ದಾರಿ 4ರ ಕ್ಯಾತ್ಸಂದ್ರ ಸೇತುವೆ ಸಮೀಪ ಕಳೆದ ಕೆಲ ದಿನಗಳ ಹಿಂದೆ ಕಾಂಡೋಮ್‌ಗಳ ರಾಶಿ ಚೆಲ್ಲಾಡಿದ್ದು ಪತ್ತೆಯಾಗಿತ್ತು. ಈ ಮಾಹಿತಿಯ ಜಾಡು ಹಿಡಿದು ವಿವರ ಸಂಗ್ರಹಿಸಿದಾಗ ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಗೊತ್ತಾಯಿತು. ಈ ವಿಚಾರವನ್ನು ಎಸ್‌ಪಿ ಗಮನಕ್ಕೆ ತಂದ ನಂತರ ದಾಳಿ ನಡೆದಿದೆ ಎಂದು ಸ್ಟ್ಯಾನ್ಲಿ ತಿಳಿಸಿದರು.‌

‘ಅಡಗುದಾಣಗಳನ್ನು ನಿರ್ಮಿಸಿ ವೇಶ್ಯಾವಾಟಿಕೆ ನಡೆಸುವ ವಸತಿಗೃಹ, ಇತರ ಕಟ್ಟಡಗಳನ್ನು ಪೊಲೀಸರು ವಶಕ್ಕೆ ಪಡೆದು ನೆಲಸಮ ಮಾಡುವಂತೆ ಕೋರ್ಟ್ ಆದೇಶವಿದೆ. ಹಾಗಾಗಿ ಈ ವಸತಿ ಗೃಹವನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಬೇಕು. ತನಿಖೆ ನಂತರ ನೆಲಸಮ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.