ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಎಚ್‌ಒ ಸಾವು; ನಿಷ್ಪಕ್ಷಪಾತ ತನಿಖೆ ನಡೆಸಿ

Last Updated 23 ಆಗಸ್ಟ್ 2020, 15:40 IST
ಅಕ್ಷರ ಗಾತ್ರ

ತುಮಕೂರು: ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರ ಸಾವಿಗೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗುವಂತೆ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆಗ್ರಹಿಸಿದೆ.

6 ತಿಂಗಳಿನಿಂದಲೂ ಕೊರೊನಾ ವಾರಿಯರ್ ಆಗಿ ಕರ್ತವ್ಯ ನಿರತರಾಗಿದ್ದ ಡಾ.ನಾಗೇಂದ್ರ ತೀವ್ರ ಕೆಲಸದ ಒತ್ತಡಕ್ಕೆ ಒಳಗಾಗಿದ್ದರು. ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತಿದ್ದರು ಎಂದು ಹೇಳಲಾಗಿದೆ. ಈ ಸಾವು ಆರೋಗ್ಯ ವ್ಯವಸ್ಥೆಯು ಹದಗೆಟ್ಟಿರುವುದನ್ನು ಎತ್ತಿತೋರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ 42,000 ಆಶಾ ಕಾರ್ಯಕರ್ತೆಯರು ಸಹ 10 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ.

ರಾಜ್ಯ ಸರ್ಕಾರವು ಕೊರೊನಾ ವಾರಿಯರ್ಸ್‌ಗಳ ಬಗ್ಗೆ ತಳೆದಿರುವ ಅಸಡ್ಡೆ, ಅನಾದರಗಳನ್ನು ತೊಡೆದು ಕೂಡಲೇ ಅವರಿಗೆ ಸೂಕ್ತ ಸುರಕ್ಷೆ, ಯೋಗ್ಯ ವೇತನ, ಸೌಕರ್ಯ ಒದಗಿಸಬೇಕು. ಆರೋಗ್ಯ ವ್ಯವಸ್ಥೆಯನ್ನು ಸಮರ್ಪಕ ಸಿಬ್ಬಂದಿ ಹಾಗೂ ಕನಿಷ್ಠ ಸುರಕ್ಷಾ ಸಾಮಗ್ರಿ, ಅಗತ್ಯ ಪರಿಕರ ಸೌಕರ್ಯಗಳಿಂದ ಸುಧಾರಿಸಬೇಕು ಎಂದು ಸಂಘದ ಪರವಾಗಿ ಮಂಜುಳ ಗೋನವಾರ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT