ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ಲಸಿಕೆ ಕೇಂದ್ರದಲ್ಲಿ ಗೊಂದಲ

Last Updated 5 ಜೂನ್ 2021, 6:08 IST
ಅಕ್ಷರ ಗಾತ್ರ

ಕುಣಿಗಲ್: ಪಟ್ಟಣದ ಕನ್ನಡ ಭವನದಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕೆ ವಿತರಣೆ ಕುರಿತು ಆರೋಗ್ಯ ಇಲಾಖೆಯಿಂದ ಸ್ಪಷ್ಟ ಮಾಹಿತಿ ನೀಡದ ಕಾರಣ ಗೊಂದಲಕ್ಕೀಡಾದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿ ಸಿಬ್ಬಂದಿ ಮತ್ತು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು.

ಲಸಿಕೆ ಪಡೆಯಲು ನೂರಾರು ಜನರು ಬಂದಿದ್ದು, 18 ವರ್ಷ ಮೇಲ್ಪಟ್ಟವರಲ್ಲಿ ಅಗತ್ಯ ದಾಖಲೆ ಹಾಜರು ಪಡಿಸಿದರೆ ಮಾತ್ರ ಆದ್ಯತೆ ಮೇರೆಗೆ ಲಸಿಕೆ ಹಾಕುವುದಾಗಿ ಸಿಬ್ಬಂದಿ ತಿಳಿಸಿದರು. ಕೆಲವರು ಸಾಲಿನಲ್ಲಿ ನಿಲ್ಲದೆ ಪ್ರಭಾವ ಬಳಸಿ ನೇರವಾಗಿ ಪ್ರವೇಶಿಸಿ ಲಸಿಕೆ ಪಡೆದು ಹೋಗುತ್ತಿರುವುದನ್ನು ಕಂಡು ಅಸಮಾಧಾನಗೊಂಡು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.

ತಹಶೀಲ್ದಾರ್ ಮಹಾಬಲೇಶ್ವರ್, ಸಿಪಿಐ ರಾಜು, ಪುರಸಭೆ ಮುಖ್ಯಾಧಿಕಾರಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಹಶೀಲ್ದಾರ್ ಮಹಾಬಲೇಶ್ವರ್, ಸರ್ಕಾರದ ನಿಯಮಾವಳಿಗಳ ಪ್ರಕಾರ 18 ವರ್ಷ ಮೇಲ್ಪಟ್ಟವರ ಪೈಕಿ ಕೆಲವರ್ಗದವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕಿದೆ. ಎಲ್ಲರಿಗೂ ಲಸಿಕೆ ನೀಡುವುದೇ ಸರ್ಕಾರದ ಗುರಿಯಾಗಿದೆ. ಹಂತಹಂತವಾಗಿ ನೀಡಲಾಗುವುದು. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಕೇಂದ್ರದಲ್ಲಿ ನೋಂದಣಿ ಕುಂಠಿತವಾಗಿದ್ದನ್ನು ಗಮನಿಸಿ ಎರಡು ಕಡೆ ನೋಂದಣಿಕಾರ್ಯಕ್ಕೆ ವ್ಯವಸ್ಥೆ ಮಾಡಿದ್ದು, ಮುಂದಿನ ದಿನಗಳಲ್ಲಿ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಮಹಾತ್ಮ ಗಾಂಧಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಲಸಿಕೆ ಕೇಂದ್ರ ಸ್ಥಳಾಂತರಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT