ಗುರುವಾರ , ಅಕ್ಟೋಬರ್ 6, 2022
23 °C

ಶಿಕ್ಷಣ ನೀತಿ ಬದಲಾವಣೆಯಿಂದ ಗೊಂದಲ: ಶಾಸಕ ಡಾ.ಜಿ.ಪರಮೇಶ್ವರ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊರಟಗೆರೆ: ಸರ್ಕಾರವು ಶಿಕ್ಷಣ ನೀತಿಯಲ್ಲಿ ಬದಲಾವಣೆ ತಂದಿರುವುದು ಅನೇಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘1986ರಿಂದ 2020ರ ವರೆಗೆ ಕ್ರಮಬದ್ಧವಾದ ಶಿಕ್ಷಣವಿದ್ದು ದೇಶದಲ್ಲಿ ದೊಡ್ಡ ಬದಲಾವಣೆಯಾಗಿದೆ. ಆದರೂ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ’ ಎಂದರು.

ಶಿಕ್ಷಣ ಕ್ರಾಂತಿ ಕಾರಕ ಶಕ್ತಿಯಾಗಿದ್ದು, ಸಮಾಜವನ್ನು ಬದಲಾಯಿಸುವ ಸಾಮರ್ಥ್ಯ ಹೊಂದಿದೆ. ಗುರು ಪರಂಪರೆ, ಗುರುಕುಲದಲ್ಲಿ ಶಿಕ್ಷಣ ನೀಡಲಾಗುತ್ತಿತ್ತು. ಆ ಕಾಲದಲ್ಲಿ ಗುರುವಿಗೆ ದೇವರಿಗಿಂತಲೂ ಹೆಚ್ಚಿನ ಸ್ಥಾನವಿತ್ತು. ಬ್ರಿಟಿಷರ ಆಳ್ವಿಕೆಯಲ್ಲಿ ಶೇ 1.5ರಷ್ಟಿದ್ದ ಸಾಕ್ಷರತೆಯ ಪ್ರಮಾಣ ಇಂದು ಶೇ 80ರಷ್ಟಾಗಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ ₹ 150 ಕೋಟಿಗೂ ಹೆಚ್ಚು ಅನುದಾನದಲ್ಲಿ 6 ವಸತಿ ಶಾಲೆ ಪ್ರಾರಂಭಿಸಲಾಗಿದೆ. ಸದಾ ಶಿಕ್ಷಕರ ಜೊತೆಗಿದ್ದು, ಅವರ ಯೋಗಕ್ಷೇಮ ನೋಡಿಕೊಳ್ಳುವುದು ನನ್ನ ಕರ್ತವ್ಯ. ಅದನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯಲ್ಲಿ ಶೇ 50ರಷ್ಟು ರಿಯಾಯಿತಿಯಲ್ಲಿ ಚಿಕಿತ್ಸೆಯ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.

ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ದೊಡ್ಡಸಿದ್ದಪ್ಪ, ಬಿಇಒ ಸುಧಾಕರ್, ಪ.ಪಂ ಅಧ್ಯಕ್ಷೆ ಕಾವ್ಯಶ್ರೀ ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ನಟರಾಜು, ಸದಸ್ಯರಾದ ಎ.ಡಿ.ಬಲರಾಮಯ್ಯ, ಕೆ.ಆರ್.ಓಬಳರಾಜು, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತರಾಯಪ್ಪ, ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಕೃಷ್ಣಮೂರ್ತಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಬಿ.ಜಿ.ಹನುಮಂತರಾಯಪ್ಪ, ನರಸಿಂಹರಾಜು, ಕೋಟೆಕಲ್ಲಯ್ಯ, ರಾಧಮ್ಮ, ವಿವಿಧ ಇಲಾಖೆಗಳ ಅಧಿಕಾರಿಗಳಾದ ರಘು, ನಾಗರಾಜು, ಸುರೇಶ್, ಅನಂತರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಡ್ಲಹಳ್ಳಿ ಅಶ್ವತ್ಥನಾರಾಯಣ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.