ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ಪಾಲಿಕೆಯಲ್ಲಿ ಕಾಂಗ್ರೆಸ್– ಜೆಡಿಎಸ್ ಮೈತ್ರಿ: ಪ್ರಭಾವತಿ ಮೇಯರ್

Last Updated 9 ಸೆಪ್ಟೆಂಬರ್ 2022, 11:02 IST
ಅಕ್ಷರ ಗಾತ್ರ

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಮೇಯರಾಗಿ ಕಾಂಗ್ರೆಸ್‌ನ ಎಂ.ಪ್ರಭಾವತಿ ಸುಧೀಶ್ವರ್ ಹಾಗೂ ಉಪಮೇಯರಾಗಿ ಜೆಡಿಎಸ್‌ನ ಟಿ.ಕೆ.ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾದರು.

ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಮೇಯರ್ ಸ್ಥಾನ ಹಿಂದುಳಿದ ವರ್ಗ–ಎ ಗೆ ಮೀಸಲಾಗಿತ್ತು.

ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲವಾಗಿದ್ದು, ಕಾಂಗ್ರೆಸ್– ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿವೆ. ಪ್ರಸಕ್ತ ಅವಧಿಯಲ್ಲಿ ಪಾಲಿಕೆ ಅಸ್ತಿತ್ವಕ್ಕೆ ಬಂದ ಸಮಯದಿಂದಲೂ ಈ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸಿಕೊಂಡು ಬಂದಿವೆ. ಆದರೆ, ಕಳೆದ ಬಾರಿ ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿತ್ತು. ಕಾಂಗ್ರೆಸ್– ಜೆಡಿಎಸ್‌ನಲ್ಲಿ ಈ ಸಮುದಾಯದಿಂದ ಯಾರೊಬ್ಬರೂ ಆಯ್ಕೆ ಆಗಿರಲಿಲ್ಲ. ಹಾಗಾಗಿ ಹಿಂದಿನ ಬಾರಿ ಬಿಜೆಪಿ ಅಧಿಕಾರ ಅನುಭವಿಸಿತ್ತು. ಈ ಮತ್ತೆ ಈ ಎರಡೂ ಪಕ್ಷಗಳ ಮೈತ್ರಿ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT