ಶುಕ್ರವಾರ, ಮೇ 27, 2022
28 °C

ಶಿರಾ: ಮಾಜಿ ಸಚಿವ ಟಿ.ಬಿ. ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ: ರಾಷ್ಟ್ರೀಯ ಹೆದ್ದಾರಿ-48ರ ಸೀಬಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತವಾಗಿದ್ದು, ಗಾಯಗೊಂಡಿದ್ದಾರೆ.

ಶಿರಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಮಯದಲ್ಲಿ ಸೀಬಿ ಬಳಿ ಕಾರಿನ ಹಿಂದಿನ ಚಕ್ರ ಸಿಡಿದು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಈ ಸಮಯದಲ್ಲಿ ಜಯಚಂದ್ರ ಅವರು ಸೀಟ್ ಬೆಲ್ಟ್ ಹಾಕಿಕೊಂಡಿದ್ದರಿಂದ ಏರ್‌ ಬ್ಯಾಗ್‌ ತೆರೆದುಕೊಂಡ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ. 

ಜಯಚಂದ್ರ ಅವರ ಎಡ ಭುಜಕ್ಕೆ ಪೆಟ್ಟಾಗಿದ್ದು ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಯಿತು. ಅವರ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದ ಚಾಲಕ ದಿಲೀಫ್ ಹಾಗೂ ಗನ್ ಮ್ಯಾನ್ ಕೃಪೇಶ್ ಆರೋಗ್ಯವಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು