ಶಿರಾ: ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗಾಗಿ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ನಾಮಪತ್ರ ಸಲ್ಲಿಸಿದರು.

ಶಿರಾದ ಗ್ರಾಮ ದೇವತೆ ದುರ್ಗಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 12.01 ಗಂಟೆಗೆ ಚುನಾವಣಾಧಿಕಾರಿ ಕಚೇರಿ ಒಳಗೆ ತೆರಳಿದ ಅವರು 12.27ಕ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಹೊರಗೆ ಬಂದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿಗದಿತ ಗಳಿಗೆಯಲ್ಲಿ ನಾಮಪತ್ರ ಸಲ್ಲಿಸಲು ಆಗಿರಲಿಲ್ಲ. ಈ ಬಾರಿ ಅಂತಹ ಗೊಂದಲ ಬೇಡ ಎಂದು ಮೊದಲ ದಿನ ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಆಪ್ತಮೂಲಗಳು ತಿಳಿಸಿವೆ. ಪಕ್ಷದ ಮುಖಂಡರು, ಕಾರ್ಯಕರ್ತರಸಮ್ಮುಖದಲ್ಲಿ 15ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.