ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕರಿಗೆ ಕಾಂಗ್ರೆಸ್ ಆದ್ಯತೆ

ಗ್ರಾಮ ಪಂಚಾಯಿತಿ ಚುನಾವಣೆ; ಮುಖಂಡರು ಹಾಗೂ ಕಾರ್ಯಕರ್ತರ ಸಭೆ
Last Updated 5 ಡಿಸೆಂಬರ್ 2020, 3:05 IST
ಅಕ್ಷರ ಗಾತ್ರ

ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ್ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು.

ಎಂ.ಡಿ.ಲಕ್ಷ್ಮಿನಾರಾಯಣ್ ಮಾತನಾಡಿ, ‘ಪಂಚಾಯಿತಿ ಚುನಾವಣೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಜವಾಬ್ದಾರಿಯನ್ನು ಮುಖಂಡರು ಹೊರಬೇಕಿದೆ. ಹೆಚ್ಚು ಸ್ಥಾನಗಳಲ್ಲಿ ಯುವಕರನ್ನು ಕಣಕ್ಕಿಳಿಸಬೇಕು. ಪಕ್ಷಕ್ಕೆ ಹೊಸ ಹುರುಪು ತರುವ ನಿಟ್ಟಿನಲ್ಲಿ ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮುಖಂಡರನ್ನು ನಿಯೋಜಿಸಲಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು’ ಎಂದು ಹೇಳಿದರು.

ಕ್ಷೇತ್ರವಾರು ಮುಖಂಡರಿಗೆ ಉಸ್ತುವಾರಿ ನೀಡಲಾಗಿದೆ. ಜಿಲ್ಲಾ ಘಟಕದ ಮುಖಂಡರು ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.

ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ಪುಟ್ಟರಾಜು, ‘ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬೂತ್ ಮಟ್ಟದಿಂದ ಸಂಘಟನೆಗೆ ಒತ್ತು ನೀಡಲಾಗಿದೆ. ಬೂತ್ ಮತಗಟ್ಟೆ ಏಜೆಂಟರನ್ನು ನೇಮಕ ಮಾಡುವ ಮೂಲಕ ಅವರ ಉಸ್ತುವಾರಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನೀಡಲಾಗಿದೆ’ ಎಂದು ತಿಳಿಸಿದರು.

ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗಮಣಿ ವೆಂಕಟಾಚಲಯ್ಯ, ಮುಖಂಡರಾದ ನೇತೇಗೌಡ, ಗುರುಪ್ರಸಾದ್, ಅನಿಲ್ ಕುಮಾರ್, ರೂಪತಾರಾ, ಅಂಬರೀಶ್, ನಟರಾಜು, ಮಂಜುನಾಥ್, ನಿಂಗರಾಜು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT