ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಿದರೆ ತುಮಕೂರಿಗೂ ಪರಿಣಾಮ: ರಿಜ್ವಾನ್ ಅರ್ಷದ್

Last Updated 3 ಆಗಸ್ಟ್ 2020, 15:05 IST
ಅಕ್ಷರ ಗಾತ್ರ

ತುಮಕೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಿದರೆ ತುಮಕೂರಿನ ಮೇಲೂ ಪರಿಣಾಮ ಬೀರುತ್ತದೆ. ಇಲ್ಲಿಯೂ ಸೋಂಕು ಹೆಚ್ಚಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಆತಂಕ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ‘ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸಚಿವರಾದ ಸುಧಾಕರ್, ಅಶೋಕ್, ಅಶ್ವತ್ಥನಾರಾಯಣ ಅವರನ್ನು ರಾಜ್ಯ ಸರ್ಕಾರ ಆರಂಭದಲ್ಲಿ ನಿಯೋಜಿಸಿತ್ತು. ಆದರೆ ಇವರ ನಡುವೆ ಸಮನ್ವಯವೇ ಇರಲಿಲ್ಲ. ಮತ್ತೆ 8 ಸಚಿವರನ್ನು ನೇಮಿಸಲಾಯಿತು. ಸೋಂಕು ನಿಯಂತ್ರಣ ವಿಚಾರದಲ್ಲಿ ಸಚಿವರ ನಡುವೆ ಇಂದಿಗೂ ಸಮನ್ವಯದ ಕೊರತೆ ಎದ್ದು ಕಾಣುತ್ತದೆ’ ಎಂದು ದೂರಿದರು.

ಕೊರೊನಾ ಸೋಂಕಿನಿಂದ ಸಾವಿರಾರು ಜನರು ಮೃತಪಡುತ್ತಿದ್ದಾರೆ. ಆದರೆ ಬಿಜೆಪಿಯವರಿಗೆ ಇದು ಹಣ ಲೂಟಿ ಮಾಡಲು ಹಬ್ಬವಾಗಿದೆ. ಇಂತಹ ಕಷ್ಟದ ಸಂದರ್ಭದಲ್ಲಿಯೂ ಹಗರಣಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಕೊರೊನಾ ನಿಯಂತ್ರಣದ ವಿಚಾರದಲ್ಲಿ ಮಾಧ್ಯಮಗಳಿಗೆ ತೋರಿಸಲು ಮಾತ್ರ ಕಾರ್ಯಕ್ರಮಗಳು ಆಗುತ್ತಿವೆಯೇ ಹೊರತು ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಕೊರೊನಾ ಸೋಂಕಿತರಿಗಷ್ಟೇ ಅಲ್ಲದೆ ಇತರೆ ರೋಗಿಗಳಿಗೂ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಇವುಗಳ ಪರಿಹಾರಕ್ಕೂ ಮುಂದಾಗುತ್ತಿಲ್ಲ ಎಂದು ಹೇಳಿದರು.

ಲಾಕ್‌ಡೌನ್ ಸಮಯದಲ್ಲಿಯೇ ಖಾಸಗಿ ಆಸ್ಪತ್ರೆಗಳ ಬಳಿ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಬೇಕಿತ್ತು. ಸೋಂಕು ಹೆಚ್ಚಾದಾಗ ಖಾಸಗಿ ವೈದ್ಯರ ಜೊತೆ ಮಾತುಕತೆ ನಡೆಸಿದರು. ಇದು ಸರ್ಕಾರದ ಬೇಜವಾಬ್ದಾರಿ ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾವು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇವೆ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಎಷ್ಟು ಸಭೆಗಳನ್ನು ಮಾಡಿದ್ದಾರೆ? ಎಷ್ಟು ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದರು.

ಮಾಜಿ ಸಚಿವ ಟಿಬಿ. ಜಯಚಂದ್ರ, ಶಾಸಕ ಎಚ್‌.ಎನ್.ಶಿವಶಂಕರ ರೆಡ್ಡಿ, ವಕ್ತಾರ ಮುರಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಶಾಸಕರಾದ ಷಫಿ ಅಹಮದ್, ರಫೀಕ್ ಅಹಮದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT