ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಪದಗ್ರಹಣ; ಪಕ್ಷಕ್ಕೆ ಬಲ

ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಾರ್ಯಕ್ರಮ; ಯುವ ಘಟಕದಿಂದ ಹಬ್ಬದಂತೆ ಆಚರಣೆ
Last Updated 2 ಜುಲೈ 2020, 16:48 IST
ಅಕ್ಷರ ಗಾತ್ರ

ತುಮಕೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣದ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಎಲ್‌ಇಡಿ ಪರದೆಯ ಮೂಲಕ ಕಾರ್ಯಕ್ರಮವನ್ನು ವೀಕ್ಷಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಮೊದಲಿಗೆ ಲಡಾನ್ ಗಡಿಯಲ್ಲಿ ಮೃತಪಟ್ಟ ಭಾರತದ 20 ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮವನ್ನು ಮಾಜಿ ಶಾಸಕ ಆರ್.ನಾರಾಯಣ, ಜಿ.ಪಂ ಸದಸ್ಯ ಕೆಂಚಮಾರಯ್ಯ, ಟೂಡಾ ಮಾಜಿ ಅಧ್ಯಕ್ಷ ಸಿ.ಶಿವಮೂರ್ತಿ ಉದ್ಘಾಟಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆಂಚಮಾರಯ್ಯ ಮಾತನಾಡಿ, ‘ವಿದ್ಯಾರ್ಥಿ ನಾಯಕರಾಗಿ, ಶಾಸಕರಾಗಿ, ಮಂತ್ರಿಯಾಗಿ ಹಂತ ಹಂತವಾಗಿ ರಾಜಕೀಯದಲ್ಲಿ ಬೆಳವಣಿಕೆ ಕಂಡ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮೂಲಕ ಪಕ್ಷವನ್ನು ತಳಮಟ್ಟದಲ್ಲಿ ಕಟ್ಟಲು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ ಎಂಬುದಕ್ಕೆ ಇಂದಿನ ಕಾರ್ಯಕ್ರಮವೇ ಸಾಕ್ಷಿ’ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಸಂವಿಧಾನ ಪೀಠಿಕೆ ಮತ್ತು ಕಾರ್ಯಕರ್ತರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಮರಿಚನ್ನಮ್ಮ, ನರಸೀಯಪ್ಪ, ಹಿಂದುಳಿದ ಘಟಕದ ಅಧ್ಯಕ್ಷ ಪುಟ್ಟರಾಜು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್, ಟೂಡಾ ಮಾಜಿ ಸದಸ್ಯೆ ಗೀತಮ್ಮ, ನಾಗಮಣಿ, ಜ್ವಾಲಮಾಲಾ ರಾಜಣ್ಣ ಇದ್ದರು.

ಯುವ ಕಾಂಗ್ರೆಸ್ ಸಂಭ್ರಮ: ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಹಬ್ಬದಂತೆ ಆಚರಿಸಿದರು.

ಕನ್ನಡ ಭವನದಲ್ಲಿ ಸಮಾರಂಭ ನೇರ ಪ್ರಸಾರದಲ್ಲಿ ವೀಕ್ಷಿಸಲು ಎಲ್‍ಇಡಿ ಪರದೆ ಅಳವಡಿಸಿದ್ದರು. ಯುವಕರು ಮತ್ತು ಸೇವಾದಳದ ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಅಂತರ ಕಾಯ್ದುಕೊಂಡು ವೀಕ್ಷಣೆ ಮಾಡಿದರು. ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ ಸಮಾರಂಭ ಸಂಘಟಿಸಿದ್ದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಶಶಿ ಹುಲಿಕುಂಟೆ ಮಠ್, ‘ತುಮಕೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಕಾರ್ಯಕರ್ತರು ಈ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದಾರೆ. ಶಿವಕುಮಾರ್ ಬೆಂಬಲಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ನಿಂತಿದ್ದು, ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ’ ಎಂದರು.

ಯುವ ಕಾಂಗ್ರೆಸ್ ಉಪಾಧ್ಯಕ್ಷ ಇಲಾಹಿ ಸಿಖಂದರ್, ಪದಾಧಿಕಾರಿಗಳಾದ ರಾಜೇಶ್ ದೊಡ್ಮನೆ, ಮೋಹನ್, ಎಸ್‌ಟಿ ಘಟಕದ ಅಧ್ಯಕ್ಷ ತು.ಬಿ.ಮಲ್ಲೇಶ್, ದರ್ಶನ್, ರಾಘವೇಂದ್ರ ಸ್ವಾಮಿ ಇದ್ದರು. 200ಕ್ಕೂ ಹೆಚ್ಚು ಯುವಕರು 7676366666 ಸಂಖ್ಯೆಗೆ ಕರೆ ಮಾಡುವ ಮೂಲಕ ಕಾಂಗ್ರೆಸ್ ಸದಸ್ಯತ್ವ ಪಡೆದರು.

***

ಐತಿಹಾಸಿಕ ದಿನ

ತುಮಕೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಸಲೀಂ ಅಹ್ಮದ್ ಅಧಿಕಾರ ಸ್ವೀಕರಿಸಿದ್ದು, ಪಕ್ಷದ ಪಾಲಿಗೆ ಐತಿಹಾಸಿಕ ದಿನ ಎಂದು ಮಾಜಿ ಶಾಸಕ ರಫೀಕ್ ಅಹ್ಮದ್ ತಿಳಿಸಿದರು.

ತಮ್ಮ ಗೃಹ ಕಚೇರಿಯಲ್ಲಿ ಆಯೋಜಿಸಿದ್ದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ವೀಕ್ಷಣೆಯಲ್ಲಿ ಅವರು ಮಾತನಾಡಿದರು.

ನಗರದ ವಿವಿಧ ವಾರ್ಡ್, ಪಕ್ಷದ ಮುಖಂಡರ ನಿವಾಸಗಳಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಮಾಜಿ ಶಾಸಕ ಶಫಿ ಅಹ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಟೊ ರಾಜು, ಕೆಪಿಸಿಸಿ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಅನಿಲ್‍ಕುಮಾರ್, ರಾಂಪ್ರಸಾದ್, ಶಾಬುದ್ದೀನ್, ಗೀತಾ ನಾಗೇಶ್, ಮಂಗಳಮ್ಮ, ಮೊಬೀನಾ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT