ಮಧುಗಿರಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 15ರಿಂದ 17 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಬಡವರ ಮನೆ ಬಾಗಿಲಿಗೆ ತಲುಪಿವೆ. ಈ ಯೋಜನೆ ಬಡವರಿಗೆ ವರದಾನವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮಹಿಳೆಯರು ಹೆಚ್ಚಿನ ಮತ ಹಾಕಿರುವುದರಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಎಂಟು ಸ್ಥಾನ ಹಾಗೂ ಎರಡನೇ ಹಂತದಲ್ಲಿ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.

ಪಟ್ಟಣದ ಒಳಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಈಗಾಗಲೇ ಎಂಜಿನಿಯರ್‌ಗೆ ಸೂಚಿಸಲಾಗಿದೆ. ಮಳೆಗಾಲ ಪ್ರಾರಂಭವಾಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸಬೇಕು. ನೀತಿ ಸಂಹಿತೆ ಮುಗಿದ ನಂತರ ಒಳಚರಂಡಿ ನಿಗಮ ಮಂಡಳಿ ಅಧ್ಯಕ್ಷ ಭೇಟಿ ನೀಡಿ ಕಾಮಗಾರಿ ವೀಕ್ಷಿಸಲಿದ್ದಾರೆ ಎಂದು ತಿಳಿಸಿದರು.

ಜಿ.ಪಂ. ಮಾಜಿ ಅಧ್ಯಕ್ಷ ಜಿ.ಜೆ.ರಾಜಣ್ಣ, ಪುರಸಭೆ ಪುರಸಭೆ ಮಾಜಿ ಅಧ್ಯಕ್ಷರಾದ ಎಂ.ಕೆ.ನಂಜುಂಡಯ್ಯ, ಎನ್. ಗಂಗಣ್ಣ, ಸದಸ್ಯರಾದ ಎಂ.ವಿ. ಮಂಜುನಾಥ್ ಆಚಾರ್, ಅಲೀಮ್, ಶ್ರೀಧರ್, ಮಾಜಿ ಸದಸ್ಯರಾದ ಉಮೇಶ್, ಸಾಧಿಕ್, ನಿವೃತ್ತ ಪ್ರಾಂಶುಪಾಲ ಮುನೀಂದ್ರಕುಮಾರ್, ಮುಖಂಡರಾದ ತಿಮ್ಮಣ್ಣಿ, ಆನಂದ ಕೃಷ್ಣ, ಬಾಬ ಪಕೃದ್ದೀನ್, ನಭೀ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.