ಮಹಿಳೆಯರು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್ ಹೊಂದಿರುವ ಬಟ್ಟೆ ಧರಿಸುವಂತಿಲ್ಲ. ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್, ಎತ್ತರವಾದ ಹಿಮ್ಮಡಿಯ ಶೂ, ಚಪ್ಪಲಿ, ದಪ್ಪವಾದ ಅಡಿ ಭಾಗ ಹೊಂದಿರುವ ಚಪ್ಪಲಿ ಧರಿಸುವಂತಿಲ್ಲ. ಮಂಗಳಸೂತ್ರ, ಕಾಲುಂಗರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣ ಧರಿಸುವಂತಿಲ್ಲ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.