ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯ ಮೇಲೆ ನಿರಂತರ ಅತ್ಯಾಚಾರ: ಪೋಕ್ಸೊ ಕಾಯ್ದೆಯಡಿ ಪ್ರಕರಣ

Last Updated 16 ಮೇ 2020, 17:21 IST
ಅಕ್ಷರ ಗಾತ್ರ

ಕೊರಟಗೆರೆ: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯನ್ನು ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದ ವೇಳೆ 4 ತಿಂಗಳ ಗರ್ಭಿಣಿಯಾಗಿರುವುದು ತಿಳಿದಿದೆ. ಕೂಡಲೇ ವೈದ್ಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸಿಡಿಪಿಒ ಅಂಬಿಕಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನನ್ವಯ ಸಿಪಿಐ ಎಫ್.ಕೆ. ನದಾಫ್, ಪಿಎಸ್ಐ ಎಚ್.ಮುತ್ತರಾಜು ತನಿಖೆ ನಡೆಸಿದ್ದಾರೆ. ಆರೋಪಿಯು ಬಾಲಕಿ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಎನ್ನುವುದು ತನಿಖೆ ವೇಳೆ ತಿಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT