ತುಮಕೂರು: ಸಂವಿಧಾನದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಅಧಿಕಾರ ಹಂಚಿಕೆ ಮಾಡಲಾಗಿದೆ ಎಂದು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಅಭಿಪ್ರಾಯಪಟ್ಟರು.

ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನರಿಗೆ ಪ್ರಜಾಸತ್ತಾತ್ಮಕ ಹಕ್ಕುಗಳಷ್ಟೇ ಅಲ್ಲ, ಸಾಮಾಜಿಕ, ಆರ್ಥಿಕ ಸಬಲತೆ, ರಾಜಕೀಯ ಸ್ವಾತಂತ್ರ್ಯ ಕಲ್ಪಿಸುವುದು ಸಂವಿಧಾನದ ಮುಖ್ಯ ಆಶಯವಾಗಿದೆ ಎಂದರು.

75 ವರ್ಷಗಳ ಇತಿಹಾಸ ನೋಡಿದಾಗ ಸಂವಿಧಾನ ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್, ಹೈಕೋರ್ಟ್ಗಳು ನಿರ್ವಹಿಸಿದ ಪಾತ್ರ ಅಗಾಧವಾದದ್ದು. ಜನರ ಹಿತಾಸಕ್ತಿಗೆ ವಿರುದ್ಧವಾದ, ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾದ ಅನೇಕ ಕಾನೂನುಗಳನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ ಎಂದು ಸ್ಮರಿಸಿದರು.

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಜಯಂತಕುಮಾರ್, ‘ಇತ್ತೀಚೆಗಿನ ದಿನಗಳಲ್ಲಿ ಶಿಸ್ತು ಕಡಿಮೆಯಾಗುತ್ತಿದ್ದು, ಕಿರಿಯರು ಹಿರಿಯ ವಕೀಲರಿಗೆ ಗೌರವ ಕೊಡುವುದನ್ನು ಕಲಿಯಬೇಕು’ ಎಂದು ಸಲಹೆ ಮಾಡಿದರು.

ಸಂವಿಧಾನದ ಕರಡು ರಚನಾ ಸಮಿತಿ ಸಭೆಯ ಚರ್ಚೆ ಓದುವುದರಿಂದ ಸಂವಿಧಾನದ ಆಶಯದ ಬಗ್ಗೆ ಗೊತ್ತಾಗಲಿದೆ. ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಿಂದಲೇ ಕೋರ್ಟ್ಗೆ ಬರುವುದರಿಂದ ನ್ಯಾಯಾಲಯಗಳ ಕಲಾಪದ ಬಗ್ಗೆ ತಿಳಿವಳಿಕೆ ಬರಲಿದೆ. ಮುಂದೆ ವಕೀಲಿ ವೃತ್ತಿಯ ಅಭ್ಯಾಸಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಪ್ರಾಂಶುಪಾಲ ರಮೇಶ್, ಪ್ರಾಧ್ಯಾಪಕರಾದ ಓಬಣ್ಣ, ಮಮತಾ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.