ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮ ಗ್ರಂಥಕ್ಕಿಂತ ಸಂವಿಧಾನವೇ ಶ್ರೇಷ್ಠ: ಶಾಸಕ ಎಸ್‌.ಆರ್. ಶ್ರೀನಿವಾಸ್

Published 26 ಜನವರಿ 2024, 13:14 IST
Last Updated 26 ಜನವರಿ 2024, 13:14 IST
ಅಕ್ಷರ ಗಾತ್ರ

ಗುಬ್ಬಿ: ಸಂವಿಧಾನ ಜಾರಿಯಾಗಿ 75 ವರ್ಷ ಕಳೆದರೂ ಸಂವಿಧಾನದ ಆಶಯ ಈಡೇರಿಸಿಕೊಳ್ಳಲು ಪ್ರಯಾಸಪಡುವಂತಾಗಿದೆ ಎಂದು ಶಾಸಕ ಎಸ್‌.ಆರ್. ಶ್ರೀನಿವಾಸ್ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವದಲ್ಲಿ ಮಾತನಾಡಿದರು.

ಶೋಷಿತ ವರ್ಗಗಳಿಗೆ ಸಂವಿಧಾನ ಆಸರೆಯಾಗಿದ್ದರೂ ಇಂದಿಗೂ ಅಸಮಾನತೆ ಇದೆ. ರೈತರ ಬೆಳೆಗಳಿಗೆ ಅವರೇ ಬೆಲೆ ನಿರ್ಧರಿಸುವಂತಾದಾಗ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲು ಸಾಧ್ಯ ಎಂದು ಹೇಳಿದರು.

ತಹಶೀಲ್ದಾರ್ ಬಿ.ಆರತಿ ಮಾತನಾಡಿ, ರಾಜಪ್ರಭುತ್ವ ಧಿಕ್ಕರಿಸಿ ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡ ಈ ದಿನ ದೇಶದ ಇತಿಹಾಸದಲ್ಲಿ ಮಹತ್ವಪೂರ್ಣದಾಗಿದೆ. ಸಂವಿಧಾನದ ಮೌಲ್ಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಹೇಳಿದರು.

ಪ್ರಾಧ್ಯಾಪಕ ಕಾಳಪ್ಪ ಬಡಿಗೇರ ಮಾತನಾಡಿ, ಬಹು ಸಂಸ್ಕೃತಿಯ ದೇಶಕ್ಕೆ ಒಪ್ಪುವ ಸಂವಿಧಾನ ರಚಿಸುವ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರಬುದ್ಧತೆ ತೋರಿದ್ದಾರೆ. ಧರ್ಮ ಗ್ರಂಥಗಳಿಗಿಂತ ಸಂವಿಧಾನವು ಶ್ರೇಷ್ಠ. ಎಲ್ಲರೂ ಮುಕ್ತ ಬದುಕನ್ನು ಕಟ್ಟಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಅಭಿಪ್ರಾಯಪಟ್ಟರು.

ಶೌರ್ಯಪ್ರಶಸ್ತಿ ವಿಜೇತ ಕ್ಯಾಪ್ಟನ್ ರಾಕೇಶ್ ಅವರ ಪೋಷಕರು ಹಾಗೂ ಸಾಧಕ ಕ್ರೀಡಾಪಟುಗಳನ್ನು ಗೌರವಿಸಲಾಯಿತು.

ತಾಲ್ಲೂಕು ಪಂಚಾಯಿತಿ ಇಒ ಪರಮೇಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವತಪ್ಪ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಂಜುಳಾದೇವಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಯತೀಶ್, ಪಟ್ಟಣ ಪಂಚಾಯಿತಿ ಸದಸ್ಯರು, ಅಧಿಕಾರಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ನಿವೃತ್ತ ಸೈನಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಫೋಟೋ 02ಸುದ್ದಿ 01ಗುಬ್ಬಿ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪೊಲೀಸ್ ವಂದನೆ ಸ್ವೀಕಾರ ಮಾಡಿದ ಶಾಸಕ ಎಸ್ ಆರ್ ಶ್ರೀನಿವಾಸ್ ತಹಶೀಲ್ದಾರ್ ಬಿ.ಆರತಿ ಹಾಗೂ ಇತರರು
ಫೋಟೋ 02ಸುದ್ದಿ 01ಗುಬ್ಬಿ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪೊಲೀಸ್ ವಂದನೆ ಸ್ವೀಕಾರ ಮಾಡಿದ ಶಾಸಕ ಎಸ್ ಆರ್ ಶ್ರೀನಿವಾಸ್ ತಹಶೀಲ್ದಾರ್ ಬಿ.ಆರತಿ ಹಾಗೂ ಇತರರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT