ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪವನ ಶಕ್ತಿ, ಸೋಲಾರ್  ಹೈಬ್ರಿಡ್ ಪಾರ್ಕ್ ನಿರ್ಮಾಣ: ಸಚಿವ ಜಾರ್ಜ್‌

Published 15 ಮಾರ್ಚ್ 2024, 15:35 IST
Last Updated 15 ಮಾರ್ಚ್ 2024, 15:35 IST
ಅಕ್ಷರ ಗಾತ್ರ

ಪಾವಗಡ (ತುಮಕೂರು): ತಾಲ್ಲೂಕಿನ ‍ರ‍್ಯಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರು ಗ್ರಾಮಗಳಲ್ಲಿ ಪವನ, ಸೌರ ವಿದ್ಯುತ್‌ನ ಹೈಬ್ರಿಡ್ ಸೋಲಾರ್ ಪಾರ್ಕ್ ಆರಂಭಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ತಾಲ್ಲೂಕಿನ ತಿರುಮಣಿ ಸೋಲಾರ್ ಪಾರ್ಕ್‌ಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿದರು. ತಿರುಮಣಿ ವಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ 2,050 ಮೆಗಾ ವ್ಯಾಟ್‌ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ರಾಪ್ಟೆ ಗ್ರಾಮ ಪಂಚಾಯಿತಿ ಆರು ಗ್ರಾಮಗಳಲ್ಲಿ ಸುಮಾರು 2 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲು ಈಗಾಗಲೇ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಪ್ರದೇಶದಲ್ಲಿ ಪವನ ಶಕ್ತಿ, ಸೋಲಾರ್ ಎರಡೂ ರೀತಿಯಲ್ಲಿ ವಿದ್ಯುತ್ ಉತ್ಪಾದಿಸಲಾಗುವುದು. ಈ ಭಾಗದಲ್ಲಿ ಬಿಸಿಲಿನ ಜತೆಗೆ ಗಾಳಿಯೂ ಬೀಸುವುದರಿಂದ ಹೈಬ್ರಿಡ್ ಪಾರ್ಕ್ ನಿರ್ಮಾಣಕ್ಕೆ ಅನುಕೂಲವಾಗಲಿದೆ ಎಂದರು.

ಉತ್ತರ ಪ್ರದೇಶ, ಪಂಜಾಬ್ ರಾಜ್ಯಗಳಿಂದ ಹಾಗೂ ಕೇಂದ್ರದಿಂದ ಹೆಚ್ಚುವರಿಯಾಗಿ ವಿದ್ಯುತ್ ಖರೀದಿಸಿ ಲೋಡ್ ಶೆಡ್ಡಿಂಗ್ ಸಮಸ್ಯೆ ಬಗೆಹರಿಸಲಾಗಿದೆ. ರೈತರಿಗೆ ಸಮಸ್ಯೆಯಾಗದಂತೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಮಧುಗಿರಿ ಸೇರಿದಂತೆ ರಾಜ್ಯದ ವಿವಿಧೆಡೆ ಸೋಲಾರ್ ಘಟಕ, ಪಾರ್ಕ್‌ಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಶಾಸಕ ಎಚ್.ವಿ.ವೆಂಕಟೇಶ್, ಕ್ರೆಡಲ್ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ವೆಂಕಟರಮಣಪ್ಪ, ಅಪರ ಮುಖ್ಯ ಕಾರ್ಯದರ್ಶಿ ಗೌರವಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಅಮರನಾಥ್, ಜಿ.ವಿ.ಬಲರಾಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT