ಬುಧವಾರ, ಡಿಸೆಂಬರ್ 2, 2020
20 °C

ಶಿಕ್ಷಕರ ಸಮಸ್ಯೆಗೆ ನಿರಂತರ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಣಿಗಲ್: ಆಗ್ನೇಯ ಪದವೀಧರ ಕ್ಷೇತ್ರದ ಮತದಾರರು ಪ್ರಜ್ಞಾವಂತರಾಗಿದ್ದು, ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿರುವ ಚೌಡರೆಡ್ಡಿ ಅವರನ್ನು ಗೆಲ್ಲಿಸಿ ಎಂದು ಮುಖಂಡ ಡಿ.ನಾಗರಾಜಯ್ಯ ಮನವಿ ಮಾಡಿದರು.

ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರದ ಸಭೆಯಲ್ಲಿ ಮಾತನಾಡಿದರು.

ಜೆಡಿಎಸ್‌ನಿಂದ ವಿಧಾನಪರಿಷತ್ ಸದಸ್ಯರಾಗಿದ್ದ ರಮೇಶ್ ಬಾಬು, ಪದವೀಧರ ಕ್ಷೇತ್ರದಿಂದಲೂ ಆಯ್ಕೆಯಾಗ ಬಯಸಿದ್ದರು. ಈಗಾಗಲೇ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಗೆದ್ದವರನ್ನು ಬಿಟ್ಟು ಬೇರೆಯವರಿಗೆ ನೀಡಲು ಒಪ್ಪದ ಕಾರಣ ಜೆಡಿಎಸ್‌ನಲ್ಲಿ ಅಧಿಕಾರ ಅನುಭವಿಸಿ, ಅನುಭವ ಪಡೆದು, ಮತ್ತೆ ಅಧಿಕಾರ ಪಡೆಯಲು ಕಾಂಗ್ರೆಸ್ ಸೇರಿದ್ದಾರೆ. ಮತದಾರರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಅಭ್ಯರ್ಥಿ ಚೌಡರೆಡ್ಡಿ ಮಾತನಾಡಿ, ದೊರೆತ ಅವಕಾಶ ಬಳಸಿಕೊಂಡು ಪದವೀಧರರ ಮತ್ತು ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡಿರುವೆ. ಕೊರೊನಾ ಭೀತಿಯಲ್ಲಿ ಬಹುತೇಕ ಪದವೀಧರರು ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಖಾಸಗಿ ಶಾಲೆ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ. ಬಿಜೆಪಿ ಸರ್ಕಾರ ಸಮಸ್ಯೆಗೆ ಸ್ಪಂದಿಸದ ಕಾರಣ ಸಮಸ್ಯೆಗಳು ಹೆಚ್ಚಾಗುತ್ತಿದೆ ಎಂದರು.

ವಿಧಾನಪರಿಷತ್ ಸದಸ್ಯರಾದ ಕಾಂತರಾಜು, ಅಪ್ಪಾಜಿ ಗೌಡ, ಜೆಡಿಎಸ್ ಯುವ ಘಟಕದ ಪ್ರದಾನ ಕಾರ್ಯದರ್ಶಿ ಬಿ.ಎನ್. ಜಗದೀಶ್, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಲ್. ಹರೀಶ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.