ಬುಧವಾರ, ಜನವರಿ 22, 2020
25 °C

ಹೊರಗುತ್ತಿಗೆ ನೌಕರರ ವೇತನ ಪಾವತಿಗೆ ಕ್ರಮವಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ವೇತನ ಪಾವತಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಡಾ.ಜಿ.ಸಿ.ನವ್ಯಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು ಹಾಗೂ ನರ್ಸ್‍ಗಳನ್ನು ಕೂಡಲೇ ನೇಮಕ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಶಾಲಾ ಕೊಠಡಿಗಳ ದುರಸ್ತಿಗೆ ಕ್ರಮವಹಿಸಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳ ವ್ಯವಸ್ಥೆ ಮಾಡಬೇಕು. ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ಹೈದಾರಾಬಾದ್-ಕರ್ನಾಟಕ ಭಾಗದಲ್ಲಿ ಇರುವಂತೆ ಶಿಬಿರಗಳನ್ನು ಜಿಲ್ಲೆಯಲ್ಲಿಯೂ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಸರ್ಕಾರಿ/ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ವಿತರಿಸುವ ಹಾಲು ಮತ್ತು ಆಹಾರದಲ್ಲಿ ವ್ಯತ್ಯಾಸ ಆಗದಂತೆ ಎಚ್ಚರವಹಿಸಬೇಕು ಎಂದರು.

ಸಮಿತಿ ಸದಸ್ಯರಾದ ಕೆಂಪ ಚೌಡಪ್ಪ, ಸಿದ್ದರಾಮಯ್ಯ, ಚನ್ನಮಲ್ಲಪ್ಪ, ಗಾಯತ್ರಿದೇವಿ, ಯಶೋದಮ್ಮ, ಸ್ಥಾಯಿ ಸಮಿತಿ ಸದಸ್ಯ ಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಇಲಾಖಾವಾರು ಅನುಷ್ಠಾನ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು