ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುದ್ಧೀಕರಣ ಘಟಕ ಸ್ಥಾಪನೆಗೆ ಸಹಕಾರ: ಶಾಸಕ

ಗುಬ್ಬಿಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಶಾಸಕ ಎಸ್.ಆರ್. ಶ್ರೀನಿವಾಸ್ ಭರವಸೆ
Last Updated 29 ಜುಲೈ 2021, 16:23 IST
ಅಕ್ಷರ ಗಾತ್ರ

ಗುಬ್ಬಿ: ಪಟ್ಟಣದಲ್ಲಿ ನಡೆಯುತ್ತಿರುವ ಯುಜಿಡಿ ಕಾಮಗಾರಿ ಅಪೂರ್ಣವಾಗಿದ್ದರೂ ಶೇ 90ರಷ್ಟು ಹಣವನ್ನು ಗುತ್ತಿಗೆದಾರರಿಗೆ ಬಿಡುಗಡೆ ಮಾಡಿರುವುದಕ್ಕೆ ಪಟ್ಟಣ ಪಂಚಾಯಿತಿ ಸದಸ್ಯರು ಜಲ ಮಂಡಳಿ ಎಂಜಿನಿಯರ್ ವಿರುದ್ಧ ಕಿಡಿಕಾರಿದರು.

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ವಿಶೇಷ ಸಭೆಯಲ್ಲಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಯುಜಿಡಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕರ ಹಣ ದುರುಪಯೋಗವಾಗಲು ಬಿಡುವು
ದಿಲ್ಲ. ಒಪ್ಪಂದದ ಪ್ರಕಾರ ಕೆಲಸ ನಡೆಯ
ಲೇಬೇಕು. ಲೋಪ ಕಂಡುಬಂದರೆ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ಪಟ್ಟಣ ಪಂಚಾಯಿತಿಯಿಂದ ನೀಡಲಾಗುವುದು. ಕಾಮಗಾರಿಯನ್ನು ಲೋಪವಿಲ್ಲದಂತೆ ಮುಗಿಸಬೇಕು ಎಂದು ಆದೇಶಿಸಿದರು.

ಕಂದಾಯ ನೀಡದ ಮಳಿಗೆಯ ಮಾಲೀಕರಿಗೆ ಮುಲಾಜಿಲ್ಲದೆ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ ಮಾತನಾಡಿ, ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಅಗತ್ಯವಿರುವ ಜಮೀನನ್ನು ಸ್ವಾಧೀನ ಮಾಡಿಕೊಳ್ಳಲು ಜಮೀನು ಮಾಲೀಕರನ್ನು ಸಂಪರ್ಕಿಸಿ ಮಾತನಾಡಿದ್ದೇವೆ. ಶಾಸಕರ ಸಮ್ಮುಖದಲ್ಲಿ ಅದನ್ನು ಬಗೆಹರಿಸಲಾಗುವುದು ಎಂದರು.

ಸದಸ್ಯ ಮೋಹನ್, ಯುಜಿಡಿ ಕಾಮಗಾರಿ ಕೆಲವೆಡೆ ಕಳಪೆಯಾಗಿರುವ ಬಗ್ಗೆ ಎಂಜಿನಿಯರ್ ಅವರ ಗಮನಕ್ಕೆ ತಂದರೂ, ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಸದಸ್ಯ ಕುಮಾರ್, ಯುಜಿಡಿ ಕಾಮಗಾರಿ ಮುಗಿಯದೇ ಕೆಲ ವಾರ್ಡ್‌ಗಳ ರಸ್ತೆಗಳಿಗೆ ಡಾಂಬರ್‌ ಹಾಕಲು ಸಾಧ್ಯವಾಗುತ್ತಿಲ್ಲ. ಮನೆಗಳಲ್ಲಿ ನಿರ್ಮಿಸಿರುವ ಚೇಂಬರ್‌ಗಳು ಕಳಪೆ ಗುಣಮಟ್ಟದ್ದಾಗಿವೆ ಎಂದರು.

ಸಂತೆ ಮೈದಾನದಲ್ಲಿರುವ ಮಾಂಸದ ಅಂಗಡಿ ತ್ಯಾಜ್ಯ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಅಂಗಡಿ ಮಾಲೀಕರಿಗೆ ತಿಳಿಸಲು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳನ್ನು ಎಲ್ಲ ಸದಸ್ಯರು ಒತ್ತಾಯಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಮಹಾಲಕ್ಷ್ಮಿ, ಸದಸ್ಯರಾದ ಶಶಿಕುಮಾರ್, ಕೃಷ್ಣ
ಮೂರ್ತಿ, ಸಿದ್ದರಾಮಣ್ಣ, ಮೋಹನ್, ರೇಣುಕಾ ಪ್ರಸಾದ್, ರಂಗಸ್ವಾಮಿ, ಕುಮಾರ್, ಶೌಕತ್ ಆಲಿ, ಮೊಹಮ್ಮದ್ ಸಾಧಿಕ್, ಮಂಗಳಮ್ಮ, ಜಯಲಕ್ಷ್ಮಿ, ಮಮತಾ, ಪಟ್ಟಣ ಪಂಚಾಯಿತಿ ಮುಖ್ಯಾ
ಧಿಕಾರಿ ಯೋಗೀಶ್, ಜಲಮಂಡಳಿ ಎಂಜಿನಿಯರ್ ಸಿದ್ದನಂಜಪ್ಪ, ಸತ್ಯನಾರಾಯಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT