ಸೋಮವಾರ, ಜುಲೈ 26, 2021
26 °C

ತುಮಕೂರು | ಕೊರೊನಾ; ನಾಲ್ಕು ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕೊರೊನಾ ಸೋಂಕಿಗೆ ತುತ್ತಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಗುರುವಾರ ಬಿಡುಗಡೆಯಾದರು.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 32 ಮಂದಿಗೆ ಸೋಂಕು ತಗುಲಿದ್ದು, ಇವರಲ್ಲಿ 15 ಮಂದಿ ಗುಣಮುಖರಾಗಿದ್ದಾರೆ. 15 ಸಕ್ರಿಯ ಪ್ರಕರಣಗಳು ಇವೆ. ಇಬ್ಬರು ಮೃತಪಟ್ಟಿದ್ದಾರೆ.

ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ 10,649 ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 9,799 ಮಾದರಿಗಳು ನೆಗೆಟಿವ್ ಬಂದಿವೆ. ಗುರುವಾರ ಒಂದೇ ದಿನ 136 ಮಾದರಿಗಳನ್ನು ಸಂಗ್ರಹಿಸಲಾಯಿತು. ಇದೇ ದಿನ 152 ಮಾದರಿಗಳ ತಪಾಸಣಾ ವರದಿಗಳು ನೆಗೆಟಿವ್ ಬಂದಿವೆ. 621 ಮಾದರಿಗಳ ವರದಿಗಳು ಬಾಕಿ ಇವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.