ಶುಕ್ರವಾರ, ಆಗಸ್ಟ್ 19, 2022
27 °C

ತುಮಕೂರು: ಮುಂದುವರಿದ ಸೋಂಕಿತರ ಸಾವಿನ ಸರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಭಾನುವಾರ ಮತ್ತೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಹೊಸದಾಗಿ 232 ಮಂದಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಭಾನುವಾರ ಮೃತಪಟ್ಟ ನಾಲ್ಕು ಮಂದಿಯೂ ಪುರುಷರೇ ಆಗಿದ್ದಾರೆ. ಅವರೆಲ್ಲರೂ 50 ವರ್ಷ ಮೇಲ್ಪಟ್ಟವರಾಗಿದ್ದಾರೆ. ನಗರದ ಎಸ್‌ಐಟಿ ಬಡಾವಣೆಯ 83 ವರ್ಷ, ಜಯನಗರ ಬಡಾವಣೆಯ 54 ವರ್ಷ ಮತ್ತು ಅಗ್ರಹಾರದ 54 ವರ್ಷ ಹಾಗೂ ಗುಬ್ಬಿ ತಾಲ್ಲೂಕು ಕಲ್ಲೂರು ಗ್ರಾಮದ 60 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ಭಾನುವಾರ ತುಮಕೂರು ತಾಲ್ಲೂಕು ಒಂದರಲ್ಲೇ 99 ಮಂದಿ ಸೇರಿದಂತೆ ಜಿಲ್ಲೆಯಾದ್ಯಂತ ಹೊಸದಾಗಿ 232 ಮಂದಿಗೆ ಸೋಂಕು ತಗುಲಿದೆ. ಇದರಲ್ಲಿ 175 ಮಂದಿ ಪುರುಷರು ಹಾಗೂ 89 ಮಂದಿ ಇದ್ದಾರೆ. ಅದರಲ್ಲಿ 5 ವರ್ಷದೊಳಗಿನ 4 ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟ 36 ಮಂದಿ ಇದ್ದಾರೆ.

ಭಾನುವಾರ 179 ಮಂದಿ ಗುಣಮುಖರಾಗಿ ಮನೆಗೆ ತೆರಳಿದರು. ಜಿಲ್ಲೆಯಲ್ಲಿ ಪ್ರಸ್ತುತ 1,803 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು