ಶನಿವಾರ, ಜುಲೈ 24, 2021
27 °C

ಕೊರಟಗೆರೆ: ಪಾರ್ಶ್ವವಾಯು ಪೀಡಿತ ವ್ಯಕ್ತಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿಯ ಕುಂಬಾರ ಬೀದಿಯ ಪಾರ್ಶ್ವವಾಯು ಪೀಡಿತ 67 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ.

ಕೊರೊನಾ ಸೋಂಕು ದೃಢಪಟ್ಟಿರುವ ವ್ಯಕ್ತಿ ಹಲವು ದಿನಗಳಿಂದ ಪಾರ್ಶ್ವವಾಯು ಪೀಡಿತರಾಗಿ ಮನೆಯಲ್ಲೇ ಇದ್ದರು. ಆದರೂ, ಸೋಂಕು ತಗುಲಿದೆ. ಸೋಂಕು ಪೀಡಿತ ವ್ಯಕ್ತಿಯ ಪ್ರಥಮ ಸಂಪರ್ಕದಲ್ಲಿದ್ದ 7 ಜನ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಇಬ್ಬರನ್ನು ಕ್ವಾರಂಟೈನ್ ಮಾಡಲಾಗಿದೆ.

ಜತೆಗೆ ಕುಂಬಾರ ಬೀದಿಯನ್ನು ಸೀಲ್‌ಡೌನ್ ಮಾಡಲಾಗಿದೆ. ಭಾನುವಾರ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಶಕುನಿತಿಮ್ಮನಹಳ್ಳಿ ತಾಂಡದ 9 ವರ್ಷದ ಹೆಣ್ಣು ಮಗುವಿಗೆ ಸೋಂಕು ಇರುವುದು ಕಂಡು ಬಂದಿತ್ತು. ಈ ಹಿನ್ನೆಯಲ್ಲಿ ಗ್ರಾಮವನ್ನು ಸೀಲ್‌ಡೌನ್ ಮಾಡಲಾಗಿದೆ ಹಾಗೂ ಮಗುವಿನ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು