ಭಾನುವಾರ, ಜೂನ್ 13, 2021
24 °C

ಕೊರೊನಾ ನಿರ್ವಹಣೆ; ಸರ್ಕಾರ ವಿಫಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಣಿಗಲ್: ದೇಶ ಜನ ಕೊರೊನಾ ಮತ್ತು ಅತಿವೃಷ್ಠಿಗಳ ಸಂಕಷ್ಟದಲ್ಲಿರುವಾಗ ಬಿಜೆಪಿ ಸರ್ಕಾರ ಜನ, ರೈತ, ಕಾರ್ಮಿಕ ವಿರೋಧಿ ನೀತಿಯನ್ನು ಜಾರಿಗೆ ತರುತ್ತಿದೆ. ಇದು ಉಳ್ಳವರಿಗೆ ವರದಾನವಾದರೆ, ಶ್ರೀಸಾಮಾನ್ಯನಿಗೆ ಶಾಪವಾಗಿ ಪರಿಣಮಿಸುತ್ತಿದೆ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.

ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಜಯಪ್ಪಾಚಾರ್ ಅವರಿಗೆ ಮನವಿ ಸಲ್ಲಿಸಿದರು.

ರೈತ ವಿರೋಧಿ ಭೂಸುಧಾರಣೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಪುರಸಭೆ ಸದಸ್ಯರು, ಮುಖಂಡರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.