ಮಂಗಳವಾರ, ಜೂನ್ 2, 2020
27 °C

ಹಿಂದೂಪುರದ ವ್ಯಕ್ತಿಗೆ ಸೋಂಕು; ಮಾಹಿತಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಡಿಗೇನಹಳ್ಳಿ:  ಆಂಧ್ರಪ್ರದೇಶದ ಹಿಂದೂಪುರದಲ್ಲಿ ಫಿಸಿಯೋಥೆರಪಿ ಕೆಲಸ ಮಾಡುತ್ತಿರುವ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ವ್ಯಕ್ತಿ ಬಳಿ ಚಿಕಿತ್ಸೆ ಪಡೆದಿರುವವರು ಕಡ್ಡಾಯವಾಗಿ ಮಧುಗಿರಿ ವೈದ್ಯಾಧಿಕಾರಿ ಅವರನ್ನು ಸಂಪರ್ಕಿಸಿ ಐಸೊಲೇಷನ್‌ಗೆ ಒಳಪಡುವಂತೆ ತಾಲ್ಲೂಕು ಆಡಳಿತ ಸೂಚಿಸಿದೆ.

ಅವರ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದಿರುವವರು ತಕ್ಷಣ ಸ್ವಯಂಪ್ರೇರಿತವಾಗಿ ಐಸೊಲೇಷನ್‌ಗೆ ಒಳಪಡಬೇಕು ಸಾಮಾಜಿಕ ಜಾಲತಾಣಗಳ ಮೂಲಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮಾಡಲಾಗುತ್ತಿದೆ.

‘ಅವರ ಚಿಕಿತ್ಸೆ ಪಡೆದಿರುವ ಐ.ಡಿ.ಹಳ್ಳಿಯ ವ್ಯಕ್ತಿಯೊಬ್ಬರನ್ನು ಗುರುತಿಸಿ ಕರೆತಂದಿದ್ದೇವೆ. ಜನರು ಸಹ ಈ ಬಗ್ಗೆ ತಿಳಿದಿದ್ದರೆ ಮಾಹಿತಿ ನೀಡಬೇಕು’ ಎಂದು ತಹಶೀಲ್ದಾರ್ ವಿಶ್ವನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.