ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು– ಕೋವಿಡ್‌: ಮಹಿಳೆ ಸಾವು

Last Updated 25 ಮೇ 2020, 2:45 IST
ಅಕ್ಷರ ಗಾತ್ರ

ತುಮಕೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ನೆಲಮಂಗಲ ತಾಲ್ಲೂಕಿನ ವೀರಸಾಗರದ 60 ವರ್ಷದ ಮಹಿಳೆ ಇಲ್ಲಿನ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಮೃತಪಟ್ಟರು.

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಜಿಲ್ಲಾಸ್ಪತ್ರೆಗೆ ಮೇ 19ರಂದು ಚಿಕಿತ್ಸೆಗೆ ದಾಖಲಾಗಿದ್ದರು. ಅವರ ಗಂಟಲು ದ್ರವ ಮತ್ತು ಕಫದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಮೇ 22ರಂದು ಅವರಲ್ಲಿ ಸೋಂಕು ದೃಢವಾಗಿತ್ತು.

ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಕಾರಣಕ್ಕೆ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT