ಶುಕ್ರವಾರ, ನವೆಂಬರ್ 27, 2020
20 °C

ಕುಣಿಗಲ್: ದ್ವಿಶತಕ ದಾಟಿದ ಸೋಂಕಿತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಣಿಗಲ್: ತುಮಕೂರು ಜಿಲ್ಲಾ ಕೇಂದ್ರದ ನಂತರ ಹೆಚ್ಚು ಸೋಂಕಿತರಿರುವ ಕುಣಿಗಲ್ ತಾಲ್ಲೂಕಿನಲ್ಲಿ ಮಂಗಳವಾರ ಸೋಂಕಿತರ ಸಂಖ್ಯೆ 200 ದಾಟಿದೆ. ಸೋಂಕಿತ ವ್ಯಕ್ತಿಯೊಬ್ಬ ಜಿಲ್ಲಾ ಕೊವೀಡ್ ಆಸ್ಪತ್ರೆಗೆ ಸಾಗಿಸುವ ಮುನ್ನ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ತಾಲ್ಲೂಕಿನ ಅಮೃತೂರು ಹೋಬಳಿಯ ಹೊಸಪಾಳ್ಯದ ನಾರಾಯಣ್ಣಪ್ಪ (67) ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಮಂಗಳವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದಾಗ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ತುಮಕೂರಿಗೆ ಸಾಗಿಸುವ ಮೊದಲೆ ಮೃತಪಟ್ಟಿದ್ದಾರೆ. ಅವರ ಮಗನಿಗೂ ಸೋಂಕು ದೃಢಪಟ್ಟಿದೆ. ಸಂಜೆ ಹೊಸಪಾಳ್ಯದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು ಎಂದು ವೈದ್ಯಾಧಿಕಾರಿ ಜಗದೀಶ್ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 206ಕ್ಕೆ ತಲುಪಿದೆ. 116 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು