ಬುಧವಾರ, ಮೇ 27, 2020
27 °C

ಕೊರೊನಾ: ಜಿಲ್ಲೆಯಲ್ಲಿ ಆತಂಕವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕೊರೊನಾ ಸೋಂಕು ಪತ್ತೆಗಾಗಿ ಏ. 7ರ ವರೆಗೂ 181 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 175 ಮಾದರಿಗಳಲ್ಲಿ ಸೋಂಕಿನ ನೆಗೆಟಿವ್ ಫಲಿತಾಂಶ ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಂದ್ರಿಕಾ ತಿಳಿಸಿದ್ದಾರೆ. 

ಕೋವಿಡ್‌-19 ಕಾಯಿಲೆ ತಡೆಗಟ್ಟಲು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾದಲ್ಲಿಡಲಾಗಿದೆ. ಈ ಪೈಕಿ 233 ಮಂದಿಯನ್ನು ಹೋಂ ಕ್ವಾರೆಂಟೈನ್‍ನಲ್ಲಿ ಇರಿಸಲಾಗಿದೆ. 130 ಮಂದಿಯನ್ನು ಐಸೋಲೇಷನ್‍ನಲ್ಲಿ ಇಡಲಾಗಿದೆ.

ಕೋವಿಡ್‌ನಿಂದ ಶಿರಾದ ವ್ಯಕ್ತಿ ಮೃತಪಟ್ಟಿದ್ದು, ಆತನ ಪುತ್ರನಿಗೆ ಕೊರೊನಾ ಸೋಂಕು ತಗುಲಿದೆ. ಬಾಲಕ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾನೆ. ಈ ಎರಡು ಪ್ರಕರಣ ಬಿಟ್ಟರೆ ಜಿಲ್ಲೆಯಲ್ಲಿ ಹೊಸದಾಗಿ ಯಾರಿಗೂ ಸೋಂಕು ತಗುಲಿಲ್ಲ. ಹಾಗಾಗಿ ಜನರಲ್ಲಿ ಮನೆಮಾಡಿದ್ದ ಆತಂಕ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು