ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ಜಿಲ್ಲೆಯಲ್ಲಿ ಮತ್ತೆ 277 ಮಂದಿಗೆ ಕೊರೊನಾ

Last Updated 11 ಸೆಪ್ಟೆಂಬರ್ 2020, 3:05 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಗುರುವಾರ ಮತ್ತೆ 277 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಮೂರು ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8,326ಕ್ಕೆ ತಲುಪಿದೆ.

ತಿಪಟೂರಿನ ಗಾಂಧಿನಗರದ 71 ವರ್ಷದ ಪುರುಷ, ತುಮಕೂರಿನ ಬಸವನಪಾಳ್ಯದ 20 ವರ್ಷದ ಮಹಿಳೆ, ತುರುವೇಕೆರೆ ತಾಲ್ಲೂಕು ಮಾಯಸಂದ್ರದ 52 ವರ್ಷದ ಪುರುಷ ಮೃತಪಟ್ಟಿರುವುದನ್ನು ಆರೋಗ್ಯ ಇಲಾಖೆ ಗುರುವಾರ ದೃಢಪಡಿಸಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 238 ಮಂದಿ ಗುಣಮುಖರಾಗಿ ಗುರುವಾರ ಮನೆಗೆ ಮರಳಿದರು.

ಜಿಲ್ಲೆಯಲ್ಲಿ ಇಲ್ಲಿಯವರೆಗೂ ಒಟ್ಟು 6,269 ಮಂದಿ ಗುಣಮುಖರಾಗಿದ್ದು 1,851 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT