ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರಿನಲ್ಲಿ 16 ಮಂದಿಗೆ ಕೊರೊನಾ

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 268ಕ್ಕೆ ಏರಿಕೆ
Last Updated 6 ಜುಲೈ 2020, 17:02 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಕೋವಿಡ್–19 ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಸೋಮವಾರ ಒಂದೇ ದಿನ 16 ಜನರಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 268ಕ್ಕೆ ಏರಿಕೆಯಾಗಿದೆ.

ತುಮಕೂರು ತಾಲ್ಲೂಕಿನಲ್ಲಿ 6, ಕೊರಟಗೆರೆ ತಾಲ್ಲೂಕಿನಲ್ಲಿ 4, ಮಧುಗಿರಿ, ಪಾವಗಡ ತಲಾ 2 ಹಾಗೂ ಚಿಕ್ಕನಾಯಕನಹಳ್ಳಿ, ಕುಣಿಗಲ್‌ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ಸೋಮವಾರ ಖಚಿತವಾಗಿದೆ. 4 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ. ಈವರೆಗೆ 65 ಮಂದಿ ಗುಣಮುಖರಾಗಿದ್ದು, 194 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ದೃಢಪಟ್ಟ ಸೋಂಕಿತರಲ್ಲಿ ಬಹುತೇಕರ ಪ್ರಯಾಣ ಮತ್ತು ಸಂಪರ್ಕಿತರ ಮಾಹಿತಿ ತಿಳಿದು ಬಂದಿಲ್ಲ. ಸೋಂಕು ಹೇಗೆ ತಗುಲಿದೆ ಇವರ ಸಂಪರ್ಕಕ್ಕೆ ಯಾರೆಲ್ಲಾ ಬಂದಿದ್ದಾರೆ ಎಂದು ಪತ್ತೆ ಹಚ್ಚುವ ಕಾರ್ಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯೋನ್ಮುಖರಾಗಿದ್ದಾರೆ.

1 ವರ್ಷದ ಮಗುವಿಗೆ ಸೋಂಕು: ನಗರದ ಸಿ.ಎಂ ಬಡಾವಣೆಯ 1 ವರ್ಷದ ಹೆಣ್ಣು ಮಗುವಿಗೆ ಹಾಗೂ 26 ವರ್ಷದ ಮಹಿಳೆ ಸೋಂಕು ತಗುಲಿದೆ. ತುಮಕೂರು ತಾಲ್ಲೂಕು ಚಿಕ್ಕಸಾರಂಗಿಯ 55 ವರ್ಷದ ಮಹಿಳೆಗೆ, ತುಮಕೂರು ಶ್ರೀನಗರದ 38 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ತುಮಕೂರು ಗ್ರಾಮಾಂತರ 29 ವರ್ಷದ ವ್ಯಕ್ತಿಗೆ ಹಾಗೂ ಕಣ್ಣಕುಪ್ಪೆಯ 46 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 6 ಮಂದಿಯ ಪ್ರಯಾಣದ ಮಾಹಿತಿ ಮತ್ತು ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ.

ವೃದ್ಧ ಸಾವು

ತುಮಕೂರು ವಿನಾಯಕನಗರದ 78 ವರ್ಷದ ವೃದ್ಧ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಇವರು ಜುಲೈ 4ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು.

ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿಯೇ ಆರೋಗ್ಯದ ಪರಿಸ್ಥಿತಿ ಗಂಭೀರವಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಭಾನುವಾರ ಮೃತಪಟ್ಟಿದ್ದಾರೆ. ಇವರ ಪ್ರಯಾಣದ ಮಾಹಿತಿ ಪತ್ತೆ ಹಚ್ಚಲಾಗುತ್ತಿದ್ದು, ಪ್ರಾಥಮಿಕ ಸಂಪರ್ಕಕ್ಕೆ ಬಂದ 4 ಜನರನ್ನು ಕಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT