ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಶಂಕೆ: ತುಮಕೂರಿನಲ್ಲಿ ರಕ್ತದ ಮಾದರಿ ಪರೀಕ್ಷೆ

Last Updated 5 ಫೆಬ್ರುವರಿ 2020, 11:13 IST
ಅಕ್ಷರ ಗಾತ್ರ

ತುಮಕೂರು: ಕೊರೊನಾ ವೈರಸ್ ಶಂಕೆ ಹಿನ್ನೆಲೆಯಲ್ಲಿ ನಗರದ ವಿದ್ಯಾರ್ಥಿಯೊಬ್ಬರ ರಕ್ತ ಮತ್ತು ಕಫದ ಮಾದರಿಯನ್ನು ಬೆಂಗಳೂರಿನ ರಾಷ್ಟ್ರೀಯ ವೈರಾಣು ಸಂಶೋಧನಾ ಕೇಂದ್ರಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ವೈರಸ್ ಪತ್ತೆಯಾದ ವುಹಾನ್‌ ನಗರದಿಂದ 800 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಗೂ ನಗರದ ಕಾಲೇಜಿನಲ್ಲಿ ವಿದ್ಯಾರ್ಥಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದಾರೆ. 10 ದಿನಗಳ ಹಿಂದೆ ವಿದ್ಯಾರ್ಥಿ ನಗರಕ್ಕೆ ಬಂದಿದ್ದಾರೆ. ನೆಗಡಿ ಮತ್ತು ಕೆಮ್ಮು ಇದ್ದ ಕಾರಣ ಜಿಲ್ಲಾ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ರಕ್ತ ಮತ್ತು ಕಫದ ಮಾದರಿ ಸಂಗ್ರಹಿಸಲಾಯಿತು. ಮನೆಯ ಪ್ರತ್ಯೇಕವಾದ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

‘ಕೊರೊನಾ ಸೋಂಕಿನ ಲಕ್ಷಣಗಳು ಇಲ್ಲ. ನೆಗಡಿ ಇದ್ದ ಕಾರಣಕ್ಕೆ ತಪಾಸಣೆಗೆ ಒಳಪಡಿಸಲಾಯಿತು. ಗುರುವಾರ (ಫೆ.6ರಂದು) ರಕ್ತ ಮತ್ತು ಕಫದ ಮಾದರಿ ಪರೀಕ್ಷೆಯ ವರದಿಗಳು ಬರಲಿವೆ’ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

ಯಾರಿಗೂ ಸೋಂಕು ತಗುಲಿಲ್ಲ: ಕೊರೊನಾ ವೈರಸ್ ಶಂಕೆ ಹಿನ್ನೆಲೆಯಲ್ಲಿ ರಾಜ್ಯದ 44 ಮಂದಿಯ ರಕ್ತದ ಮಾದರಿಯ ಪರೀಕ್ಷೆ ನಡೆಸಲಾಗಿದೆ. ಆದರೆ ಇಲ್ಲಿಯವರೆಗೂ ಯಾರಿಗೂ ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಈ ವಿಚಾರದಲ್ಲಿ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ನಗರದಲ್ಲಿ ಸುದ್ದಿಗಾರರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲುತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT