ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾ: ವೈದ್ಯರ ಪ್ರತಿಭಟನೆಗೆ ಪರಿಷತ್ ಸದಸ್ಯ ಬೆಂಬಲ

Published 17 ಆಗಸ್ಟ್ 2024, 14:22 IST
Last Updated 17 ಆಗಸ್ಟ್ 2024, 14:22 IST
ಅಕ್ಷರ ಗಾತ್ರ

ಶಿರಾ: ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದನ್ನು ವಿರೋಧಿಸಿ ಪಟ್ಟಣದಲ್ಲಿ ಶನಿವಾರ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಡೆಸುತ್ತಿದ್ದ ಪ್ರತಿಭಟನೆಗೆ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.

‘ಜನರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಿ ನಿಮ್ಮ ಹೋರಾಟಕ್ಕೆ ಸದಾ ಬೆಂಬಲವಾಗಿ ನಿಲ್ಲುತ್ತೇನೆ. ವೈದ್ಯರನ್ನು ಜನತೆ ದೇವರೆಂದು ನಂಬಿದ್ದಾರೆ. ಇಂತಹ ವೈದ್ಯರಿಗೆ ರಕ್ಷಣೆ ಇಲ್ಲದಿದ್ದರೆ ಹೇಗೆ. ಸರ್ಕಾರ ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಪಶ್ಚಿಮ ಬಂಗಾಳದಲ್ಲಿ ಮಹಿಳೆಯೇ ಮುಖ್ಯಮಂತ್ರಿಯಾಗಿದ್ದರೂ ಮಹಿಳಾ ವೈದ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇದರ ನೈತಿಕ ಹೊಣೆ ಹೊತ್ತು ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು. ತಕ್ಷಣ ವೈದ್ಯರ ಬೇಡಿಕೆಗಳಿಗೆ ಸ್ಪಂದಿಸಬೇಕು’ ಎಂದು ಅವರು ಒತ್ತಾಯಿಸಿದರು.

ಹಿರಿಯ ವೈದ್ಯ ರಾಮಕೃಷ್ಣ, ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶ್ರೀನಾಥ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಡಿ.ಎಂ.ಗೌಡ, ಬಿಜೆಪಿ ಅಧ್ಯಕ್ಷ ಚಿಕ್ಕಣ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾ ವಿಜಯರಾಜು, ರಂಗಸ್ವಾಮಿ, ಕದುರೆಹಳ್ಳಿ ಮೂರ್ತಿ ಪಾಲ್ಗೊಂಡಿದ್ದರು.

ಶಿರಾದಲ್ಲಿ ಶನಿವಾರ ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ವಿರೋಧಿಸಿ ವೈದ್ಯರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಶಿರಾದಲ್ಲಿ ಶನಿವಾರ ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ವಿರೋಧಿಸಿ ವೈದ್ಯರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸಲ್ಲಿಕೆ: ತಾಲ್ಲೂಕು ಕಚೇರಿಗೆ ತೆರಳಿದ ವೈದ್ಯರು ಕೋಲ್ಕತ್ತದಲ್ಲಿ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ‌ ಮಾಡಿರುವುದು ಖಂಡನೀಯ, ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT