ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀಕ್ಷಕರ ವೀಕ್ಷಣೆಯಲ್ಲಿ ಮತ ಎಣಿಕೆ

ಮತ ಎಣಿಕೆ ಕೇಂದ್ರದ ಸುತ್ತಮುತ್ತ ವಾಹನ ಸಂಚಾರ ಮಾರ್ಗ ಬದಲಾವಣೆ, ಬಿಗಿ ಬಂದೋಬಸ್ತ್
Last Updated 22 ಮೇ 2019, 15:34 IST
ಅಕ್ಷರ ಗಾತ್ರ

ತುಮಕೂರು: ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯು ಗುರುವಾರ ಬೆಳಿಗ್ಗೆ 8ರಿಂದ ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದಲ್ಲಿ ನಡೆಯಲಿದೆ.

ಇದಕ್ಕೂ ಮುನ್ನ 7.30ಕ್ಕೆ ಗಂಟೆಗೆ ಚುನಾವಣೆ ವೀಕ್ಷಕರು ಹಾಗೂ ರಾಜಕೀಯ ಪಕ್ಷಗಳ ಏಜೆಂಟರ ಸಮಕ್ಷಮದಲ್ಲಿ ಮತ ಯಂತ್ರಗಳನ್ನು ಇರಿಸಿರುವ ಭದ್ರತಾ ಕೊಠಡಿಯನ್ನು ತೆರೆಯಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ತಿಳಿಸಿದ್ದಾರೆ.

ವೀಕ್ಷಕರ ವೀಕ್ಷಣೆಯಲ್ಲಿ ಮತ ಎಣಿಕೆ: ‘ಕ್ಷೇತ್ರದ ಮತ ಎಣಿಕೆ ಕಾರ್ಯದ ವೀಕ್ಷಣೆಗಾಗಿ 4 ಮಂದಿ ವೀಕ್ಷಕರನ್ನು ನಿಯೋಜಿಸಲಾಗಿದ್ದು, ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ಕ್ಷೇತ್ರಗಳಿಗೆ ಹೇಮಂತಕುಮಾರ್ ಪಧಿ, ತುರುವೇಕೆರೆ ಹಾಗೂ ತುಮಕೂರು ನಗರ ಕ್ಷೇತ್ರಕ್ಕೆ ರೀನಾಸಿಂಗ್, ತುಮಕೂರು ಗ್ರಾಮಾಂತರ ಹಾಗೂ ಕೊರಟಗೆರೆ ಕ್ಷೇತ್ರಕ್ಕೆ ಬನ್ಷ್ ಬಹಾದ್ದೂರ್ ವರ್ಮ, ಗುಬ್ಬಿ ಹಾಗೂ ಮಧುಗಿರಿ ಕ್ಷೇತ್ರಕ್ಕೆ ಶೀಲ್‌ಧರ್ ಸಿಂಗ್ ಯಾದವ್ ಇವರ ವೀಕ್ಷಣೆಯಲ್ಲಿ ಮತ ಎಣಿಕೆ ನಡೆಯಲಿದೆ’ ಎಂದು ಹೇಳಿದ್ದಾರೆ.

‘ಎನ್‌ಐಸಿ ಸಾಫ್ಟ್‌ವೇರ್ ಮತ್ತು ಸುವಿಧ ಸಾಫ್ಟ್‌ವೇರ್‌ನಲ್ಲಿ ಮತದಾನದ ಅಂಕಿ-ಅಂಶಗಳನ್ನು ದಾಖಲು ಮಾಡಿ ಅಪ್‌ಲೋಡ್ ಮಾಡಲಾಗುವುದು. ಪ್ರತಿ ರೌಂಡ್‌ನ ಪ್ರಗತಿಯನ್ನು ಮೈಕ್ ಮೂಲಕ ಪ್ರಕಟಿಸಲು ಕ್ರಮ ವಹಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಮಾಹಿತಿಯನ್ನು ಸುವಿಧ ಸಾಫ್ಟ್‌ವೇರ್‌ನಲ್ಲಿ ಅಪ್ ಲೋಡ್ ಮಾಡಿದ ನಂತರ ಸಾರ್ವಜನಿಕರು ವೀಕ್ಷಿಸಬಹುದಾಗಿದೆ’ ಎಂದು ತಿಳಿಸಿದ್ದಾರೆ.

‘ಮತ ಎಣಿಕೆ ಏಜೆಂಟರ್‌ಗಳಿಗೆ ಪಾಸ್‌ಗಳನ್ನು ಈಗಾಗಲೇ ವಿತರಿಸಲಾಗಿದೆ. ಪಾಸ್‌ಗಳನ್ನು ತಂದವರಿಗೆ ಮಾತ್ರ ನಿಗದಿತ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಟೇಬಲ್‌ಗಳಿಗೆ ಪ್ರವೇಶ ನೀಡಲಾಗುವುದು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರುಗಳಿಗೆ ಎಣಿಕಾ ಕೇಂದ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT